ಉಪಚುನಾವಣೇಲಿ 13, 2023ಕ್ಕೆ 150 ಸ್ಥಾನ ಗೆದ್ದು ಬರ್ತೀವಿ: ಸಿಎಂ ಯಡಿಯೂರಪ್ಪ
ಉಪ ಚುನಾವಣೆಯಲ್ಲಿ 13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು ಇನ್ನು ಮೂರುವರೆ ವರ್ಷಗಳ ಕಾಲ ನಮ್ಮ ಸರ್ಕಾರ ಸುಭದ್ರವಾಗಿರಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಉಪ ಚುನಾವಣೆಯಲ್ಲಿ 13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು ಇನ್ನು ಮೂರುವರೆ ವರ್ಷಗಳ ಕಾಲ ನಮ್ಮ ಸರ್ಕಾರ ಸುಭದ್ರವಾಗಿರಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಯಲಹಂಕ ಉಪನಗರದಲ್ಲಿ ನೂತನವಾಗಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ಮತ್ತು 400ಕೋಟಿ.ರೂ. ಅಂದಾಜು ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾನು ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳು ಎಲ್ಲಾ ಕ್ಷೇತ್ರಗಳಲ್ಲೂ ಎರಡೆರಡು ಸಲ ಪ್ರಚಾರ ಮಾಡಿದ್ದೇವೆ. ಆದ್ದರಿಂದ 13 ಕ್ಷೇತ್ರಗಳಲ್ಲಿ ನೂರಕ್ಕೆ ನೂರು ಗೆಲ್ಲುತ್ತೇವೆ. ಮೂರೂವರೆ ವರ್ಷ ಸ್ಥಿರ ಸರ್ಕಾರ ಕೊಡುತ್ತೇವೆ. ಪ್ರತಿಪಕ್ಷಗಳೂ ಸಹಕಾರ ಕೊಡಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದರು. ಅಲ್ಲದೆ ಮೂರೂವರೆ ವರ್ಷದ ಬಳಿಕ ಮತ್ತೆ ಚುನಾವಣೆಯಲ್ಲಿ 150 ಸ್ಥಾನ ಗೆದ್ದು ಅಧಿಕಾರಕ್ಕೆ ಏರುವುದಾಗಿಯೂ ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಮುನ್ನ ಉಪಚುನಾವಣೆ ಬಳಿಕ ರಾಜ್ಯದಲ್ಲಿ ಬದಲಾವಣೆಗಳು ಕಂಡುಬರಲಿದೆ ಎಂದಿದ್ದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಉಲ್ಲೇಖಿಸಿದ ಯಡಿಯೂರಪ್ಪ ಅಂತಹಾ ಬದಲಾವಣೆಗಳು ಆಗುವುದಿಲ್ಲ. ನಾವು ಅಧಿಕಾರದಲ್ಲಿ ಮುಂದುವರಿದರೆ ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲಿರಲಿದೆ ಅಷ್ಟೇ ಬದಲಾವಣೆ ಎಂದಿದ್ದಾರೆ.
Related Article
ಉಪಚುನಾವಣೆ: ಬಿಜೆಪಿ ಗೆದ್ದರೂ ಯಡಿಯೂರಪ್ಪಗೆ ಕಠಿಣವಾಗಿ ಪರಿಣಮಿಸಲಿದೆ ಮುಂದಿನ ಹಾದಿ?
ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಎಸ್ಎ ರಾಮದಾಸ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


