ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ, ರಾಜ್ಯದ ಅಭ್ಯುದಯಕ್ಕೆ ಪೂರಕ: ಕಟೀಲ್
ರಾಜ್ಯದಲ್ಲಿ ಸ್ಥಿರ ಸರ್ಕಾರಕ್ಕಾಗಿ ಮತ್ತು ಕೇಂದ್ರದ ನರೇಂದ್ರಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಬಲಪಡಿಸಲು ಮಹತ್ವದ ತೀರ್ಪು ನೀಡಿದ ರಾಜ್ಯದ ಮತದಾರರಿಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಸ್ಥಿರ ಸರ್ಕಾರಕ್ಕಾಗಿ ಮತ್ತು ಕೇಂದ್ರದ ನರೇಂದ್ರಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಬಲಪಡಿಸಲು ಮಹತ್ವದ ತೀರ್ಪು ನೀಡಿದ ರಾಜ್ಯದ ಮತದಾರರಿಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.
ಕೇಂದ್ರದಲ್ಲಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರದ ಸಾಧನೆಗಳನ್ನು ಜನ ಬಲಿಸಿರುವುದು ಈ ಚುನಾವಣೆಯಿಂದ ಮತ್ತೊಮ್ಮೆ ಸ್ಪಷ್ಟವಾಗಿದೆ. ಮಹತ್ವದ ಕಾಲಘಟ್ಟದಲ್ಲಿ ಮತದಾರರು ಬಿಜೆಪಿ ಸರ್ಕಾರವನ್ನು ಬಲಪಡಿಸಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಅಧಿಕಾರದಲ್ಲಿರುವುದರಿಂದ ರಾಜ್ಯದ ಪ್ರಗತಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ನರೇಂದ್ರಮೋದಿ ನೇತೃತ್ವದ ಕೇಂದ್ರದಲ್ಲಿನ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಜನಕಲ್ಯಾಣ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠನಗೊಳಿಸಲು, ರಾಜ್ಯಕ್ಕೆ ಅಗತ್ಯ ಅನುದಾನ ತರಲು ಈ ಫಲಿತಾಂಶ ಸಹಕಾರಿಯಾಗಲಿದೆ. ಸಿಲಿಕಾನ್‌ಸಿಟಿ ಬೆಂಗಳೂರಿನಲ್ಲಿ ಮೂಲ ಸೌಕರ್ಯ ಹೆಚ್ಚಿಸಿ, ಭವಿಷ್ಯದ ನಗರವನ್ನಾಗಿ ರೂಪಿಸುವ ಆಶಯ ಈಡೇರಲು ಪೂರಕ ವಾತಾವರಣ ಸೃಷ್ಟಿಯಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


