ಮಂಡ್ಯ ಜಿಲ್ಲೆಯಲ್ಲಿ ಖಾತೆ ತೆರೆದ ಬಿಜೆಪಿ: ಮಗನಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದ ಮುಖ್ಯಮಂತ್ರಿ ಬಿಎಸ್ ವೈ!
ಜೆಡಿಎಸ್ ಭದ್ರಕೋಟೆ ಎಂದೇ ಜನಜನಿತವಾಗಿದ್ದ ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪಾಳಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.

ಬೆಂಗಳೂರು: ಜೆಡಿಎಸ್ ಭದ್ರಕೋಟೆ ಎಂದೇ ಜನಜನಿತವಾಗಿದ್ದ ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪಾಳಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.
ಕೆ. ಆರ್. ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ , ಗೆಲುವಿನ ಸನ್ನಿಹಕ್ಕೆ ಬರುತ್ತಿದ್ದಂತೆಯೇ ಬೆಂಗಳೂರಿನ ನಿವಾಸದಲ್ಲಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರನಿಗೆ ಸಿಹಿ ತಿನ್ನಿಸಿ ಸಂಭ್ರಮ ಪಟ್ಟರು.
ಕೆ. ಆರ್. ಪೇಟೆ ಗೆಲುವಿನಲ್ಲಿ ವಿಜಯೇಂದ್ರ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಕ್ಷೇತ್ರದಲ್ಲಿ ಚುನಾವಣಾ ಉಸ್ತುವಾರಿಯನ್ನು ಅವರೇ ವಹಿಸಿಕೊಂಡಿದ್ದರು. ತಮ್ಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಬಾಯಿಸುವ ಮೂಲಕ ತಾವೊಬ್ಬ ಭವಿಷ್ಯದ ಅತ್ಯುತ್ತಮ ಸಂಘಟನಗಾರ ಎಂಬುದನ್ನು ವಿಜಯೇಂದ್ರ ನಿರೂಪಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ಹಾಗೂ ವಿಜಯೇಂದ್ರ ಅವರ ನೇತೃತ್ವದಲ್ಲಿ ಕೆ. ಆರ್ ಪೇಟೆಯ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮತ್ತೆ ಗೆಲುವು ಸಾಧಿಸುವಂತಾಗಿದ್ದು, ಬಿಜೆಪಿ ವಲಯದಲ್ಲಿ ಉತ್ಸಾಹ ಇಮ್ಮಡಿಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


