ನಗರಾಭಿವೃದ್ಧಿ ಖಾತೆ ಮೇಲೆ ಬೈರತಿ ಬಸವರಾಜ್ ಕಣ್ಣು
ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲಾ ಶಾಸಕರಿಗೂ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಯ ನೀಡಿದ ಬೆನ್ನಿಗೇ ಗೆಲುವು ಸಾಧಿಸಿದ ಎಲ್ಲರಲ್ಲಿಯೂ

ಬೆಂಗಳೂರು: ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲಾ ಶಾಸಕರಿಗೂ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಯ ನೀಡಿದ ಬೆನ್ನಿಗೇ ಗೆಲುವು ಸಾಧಿಸಿದ ಎಲ್ಲರಲ್ಲಿಯೂ ಮತ್ತೆ ಮಂತ್ರಿಸ್ಥಾನದ ಮೇಲೆ ಆಸೆ ಚಿಗುರಿದ್ದು, ಕೆ.ಆರ್.ಪುರ ಕ್ಷೇತ್ರದ ಬೈರತಿ ಬಸವರಾಜ್ ನಗರಾಭಿವೃದ್ಧಿ ಇಲಾಖೆ ಮೇಲೆ ಕಣ್ಣಿಟ್ಟಿದ್ದಾರೆ.
ಗೆಲುವು ಸಾಧಿಸಿದ ಖುಷಿಯಲ್ಲಿ ಬೈರತಿ ಬಸವರಾಜ್ ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
ಬಳಿಕ ಮಾತನಾಡಿದ ಅವರು, ಎಲ್ಲರಿಗೂ ಸಚಿವ ಸ್ಥಾನ ಕೊಡುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ನಮಗೆ ನೀಡಿದ ಮಾತನ್ನು ನೆರವೇರಿಸುವುದಾಗಿ ಅವರು ಹೇಳಿದ್ದರಿಂದ ನಗರಾಭಿವೃದ್ಧಿ ಖಾತೆ ಕೊಡುವಂತೆ ಕೇಳಿದ್ದೇನೆ. ಆದರೂ ಖಾತೆ ಹಂಚಿಕೆಯ ತೀರ್ಮಾನ ಮುಖ್ಯ ಮಂತ್ರಿಗಳ ವಿವೇಚನೆಗೆ ಬಿಟ್ಟ ವಿಷಯ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


