ರಾಜಕೀಯ

ಉಪಚುನಾವಣೆಯಲ್ಲಿ ಭರ್ಜರಿ ಗೆಲುವು: ಸಿಲಿಕಾನ್ ಸಿಟಿ ಕಸದ ಸಮಸ್ಯೆ ದೂರಾಗಿಸುವ ಭರವಸೆ ನೀಡಿದ ಸಿಎಂ

ರಾಜ್ಯ ಸರ್ಕಾರ ಅಳಿವು-ಉಳಿವಿನ ಪ್ರಶ್ನೆಯಾಗಿದ್ದ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಗೆಲುವಿನ ಖುಷಿಯಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ನಗರಕ್ಕೆ ತಲೆದೋರಿರುವ ಕಸದ ಸಮಸ್ಯೆಗೆ ಅಂತ್ಯ ಹಾಡುವುದಾಗಿ ಭರವಸೆ ನೀಡಿದ್ದಾರೆ.

ಉಪಚುನಾವಣೆಯಲ್ಲಿ ಭರ್ಜರಿ ಗೆಲುವು: ಸಿಲಿಕಾನ್ ಸಿಟಿ ಕಸದ ಸಮಸ್ಯೆ ದೂರಾಗಿಸುವ ಭರವಸೆ ನೀಡಿದ ಸಿಎಂ
ಯಡಿಯೂರಪ್ಪ
Published On :

ಬೆಂಗಳೂರು: ರಾಜ್ಯ ಸರ್ಕಾರ ಅಳಿವು-ಉಳಿವಿನ ಪ್ರಶ್ನೆಯಾಗಿದ್ದ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಗೆಲುವಿನ ಖುಷಿಯಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ನಗರಕ್ಕೆ ತಲೆದೋರಿರುವ ಕಸದ ಸಮಸ್ಯೆಗೆ ಅಂತ್ಯ ಹಾಡುವುದಾಗಿ ಭರವಸೆ ನೀಡಿದ್ದಾರೆ. 

ಈ ಬಾರಿಯ ಉಪಚುನಾಣೆಯಲ್ಲಿ ನಗರದ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಶಿವಾಜಿನಗರವನ್ನು ಹೊರತುಪಡಿಸಿದರ, ಯಶವಂತಪುರ, ಕೆ.ಆರ್.ಪುರಂ ಹಾಗೂ ಮಹಾಲಕ್ಷ್ಮೀ ಲೇಔಟ್ ನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 

ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆಯೇ ಸುದ್ದಿಗಾರರೊಂದಿಗೆ ಮಾತನಾಡಿರುವ ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಅವರು, ನಗರದಲ್ಲಿ ತಲೆದೋರಿರುವ ಕಸದ ಸಮಸ್ಯೆಯನ್ನು ದೂರಾಗಿಸಲು ಏನು ಮಾಡಬಹುದು ಎಂಬುದರ ಕುರಿತು ಈ ಹಿಂದೆ ನಡೆದ ಸಭೆಯಲ್ಲಿಯೇ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಅನ್ವಯ ಕಸವನ್ನು ತೆಗೆದುಕೊಂಡು ಹೋಗುವ ವಾಹನಗಳಿಗೆ ಜಿಪಿಎಸ್ ಗಳನ್ನು ಅಳವಡಿಸಲು ಟೆಂಡರ್ ಕರೆಯಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. 

ಜಿಪಿಎಸ್ ಅಳವಡಿಕೆಯಿಂದ ವಾಹನಗಳು ಎಷ್ಟು ಸಮಯಕ್ಕೆ ಸ್ಥಳಕ್ಕೆ ತೆರಳುತ್ತವೆ, ಎಷ್ಟು ಗಂಟೆಗೆ ಸ್ಥಳವನ್ನು ಬಿಡುತ್ತವೆ? ಯಾವ ಯಾವ ಪ್ರದೇಶಗಳಲ್ಲಿ ವಾಹನಗಳು ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ತಿಳಿದುಕೊಳ್ಳಲು ಸಹಾಯಕವಾಗುತ್ತವೆ ಎಂದು ತಿಳಿಸಿದ್ದಾರೆ. 

ಘನತ್ಯಾಜ್ಯ ನಿರ್ವಹಣೆಗಾಗಿ ಸರ್ಕಾರ ಮೂರು ವರ್ಷಗಳ ಅವಧಿಗೆ ರೂ.900 ಕೋಟಿ ಬಿಡುಗಡೆ ಮಾಡಿದ. ಶೀಘ್ರದಲ್ಲಿಯೇ ಟೆಂಡರ್ ಕರೆಯಲು ಸಿದ್ಧತೆಗಳೂ ನಡೆಯುತ್ತಿವೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ಡಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.