'ಎಸ್ .ಎಂ ಕೃಷ್ಣ ಅವಧಿ ಮುಗಿದ ಮೇಲೆ ಗುಂಪುಗಾರಿಕೆ ಮಾಡಬಹುದಿತ್ತು, ನನಗೆ ಅವಶ್ಯಕತೆಯಿಲ್ಲ'
ಪಕ್ಷದಲ್ಲಿ ತಾವು ಇದುವರೆಗೆ ಯಾವುದೇ ಗುಂಪುಗಾರಿಕೆ ಮಾಡಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾವುದೇ ಲಾಬಿ ನಡೆಸಿಲ್ಲ. ಲಾಬಿ ಮಾಡುವ ಅವಶ್ಯಕತೆಯೂ ತಮಗಿಲ್ಲ ಇಲ್ಲ ಎಂದು ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ಪಕ್ಷದಲ್ಲಿ ತಾವು ಇದುವರೆಗೆ ಯಾವುದೇ ಗುಂಪುಗಾರಿಕೆ ಮಾಡಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾವುದೇ ಲಾಬಿ ನಡೆಸಿಲ್ಲ. ಲಾಬಿ ಮಾಡುವ ಅವಶ್ಯಕತೆಯೂ ತಮಗಿಲ್ಲ ಇಲ್ಲ ಎಂದು ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವೆಂದಿಗೂ ಜಾತಿ, ಧರ್ಮದ ಆಧಾರದಲ್ಲಿ ಗುಂಪು ಕಟ್ಟಿಲ್ಲ. ಒಂದು ವೇಳೆ ಒಕ್ಕಲಿಗ ಸಮುದಾಯದ ಆಧಾರದ ಮೇಲೆ ಗುಂಪುಗಾರಿಕೆ ಮಾಡುವುದೇ ಆಗಿದ್ದರೆ ಪಕ್ಷದಲ್ಲಿ ಎಸ್.ಎಂ.ಕೃಷ್ಣ ಅವರ ಅವಧಿ ಮುಗಿದ ಸಂದರ್ಭದಲ್ಲಿಯೇ ಗುಂಪು ಕಟ್ಟಬಹುದಿತ್ತು. ಆದರೆ ತಾವೆಂದಿಗೂ ಅಂತಹ ಕೆಲಸ ಮಾಡಿಲ್ಲ ಎಂದರು.
ಪಕ್ಷದಲ್ಲಿ ಕಾರ್ಯಕರ್ತರ ವಿಶ್ವಾಸ ಅತಿಮುಖ್ಯ. ಉಪಚುನಾವಣೆಯ ಸೋಲಿನಿಂದಾಗಿ ಕಾರ್ಯಕರ್ತರು ವಿಶ್ವಾಸ ಕಳೆದುಕೊಳ್ಳಬಾರದು ಎಂದು ಕಿವಿಮಾತು ಹೇಳಿದಕು.
ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಹಾಗೂ ಶಾಸಕಾಂಗ ನಾಯಕ ಸ್ಥಾನಗಳು ಯಾವುದು ಖಾಲಿಯಿಲ್ಲ. ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಅವರ ರಾಜೀನಾಮೆಯನ್ನು ಹೈಕಮಾಂಡ್ ಇನ್ನೂ ಅಂಗೀಕರಿಸಿಲ್ಲ. ಚುನಾವಣೆಯ ಸೋಲಿಗೆ ಸಿದ್ದರಾಮಯ್ಯ, ಗುಂಡೂರಾವ್ ತಮ್ಮ ನೋವು ವ್ಯಕ್ತಪಡಿಸಿದ್ದಾರೆ. ಉಪ ಚುನಾವಣೆಯಲ್ಲಿ ಸೋಲು ಗೆಲುವು ಇರುವುದು ಸಹಜ. ತಾವು ಸಹ ಹಿಂದೆ ಇಂತಹ ಅನೇಕ ಉಪಚುನಾವಣೆಗಳನ್ನು ನಡೆಸಿ ಅದರ ಫಲಿತಾಂಶದ ಅನುಭವವೂ ತಮಗಿದೆ. ಜನ ಸೇರಿದ ತಕ್ಷಣ ಮತ ಹಾಕುವುದಿಲ್ಲ. ಮತ ರಾಜಕೀಯವೇ ಬೇರೆ ಚುನಾವಣಾ ರಾಜಕೀಯವೇ ಬೇರೆ ಎಂದು ಮಾರ್ಮಿಕವಾಗಿ ಡಿ.ಕೆ.ಶಿವಕುಮಾರ್ ಹೇಳಿದರು.
ದೆಹಲಿಯಲ್ಲಿ ನಡೆಯುತ್ತಿರುವ ಭಾರತ್ ಬಚಾವ್ ಆಂದೋಲನದಲ್ಲಿ ಪಾಲ್ಗೊಳ್ಳಲು ತಾವಿಂದು ದೆಹಲಿಗೆ ತೆರಳುತ್ತಿದ್ದೇನೆ. ಸದ್ಯ ಮಾಧ್ಯಮಗಳು ತಮ್ಮನ್ನು ಮುಕ್ತವಾಗಿ ಬಿಟ್ಟರೆ ಸಾಕು ಎಂದು ಕೆಪಿಸಿಸಿ ಅಧ್ಯಕ್ಷ ಸ್ಥಾನ ಜವಾಬ್ದಾರಿ ವಹಿಸಿಕೊಳ್ಳುವೀರಾ ಎಂಬ ಪ್ರಶ್ನೆಗೆ ಶಿವಕುಮಾರ್ ಹಾರಿಕೆಯ ಉತ್ತರ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


