ರಾಜಕೀಯ

ಶ್ರೀರಾಮುಲು ನನಗಿಂತ ಕಿರಿಯ, ಮೊದಲು ನಾನು ಮಂತ್ರಿಯಾಗಬೇಕಿತ್ತು: ಯತ್ನಾಳ್

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಮೊದಲು ನಾನು ಮಂತ್ರಿಯಾಗಬೇಕಿತ್ತು. ಉಪಮುಖ್ಯಮಂತ್ರಿ ಆಕಾಂಕ್ಷಿಯಾಗಿರುವ ಶ್ರೀರಾಮುಲು ನನಗಿಂತ ಕಿರಿಯ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ

ಶ್ರೀರಾಮುಲು ನನಗಿಂತ ಕಿರಿಯ, ಮೊದಲು ನಾನು ಮಂತ್ರಿಯಾಗಬೇಕಿತ್ತು: ಯತ್ನಾಳ್
ಯತ್ನಾಳ್
Published On :

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಮೊದಲು ನಾನು ಮಂತ್ರಿಯಾಗಬೇಕಿತ್ತು. ಉಪಮುಖ್ಯಮಂತ್ರಿ ಆಕಾಂಕ್ಷಿಯಾಗಿರುವ ಶ್ರೀರಾಮುಲು ನನಗಿಂತ ಕಿರಿಯ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಸನಗೌಡ ಯತ್ನಾಳ್, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮೊದಲ ಕಂತಿನಲ್ಲೆ ನಾನು ಮಂತ್ರಿಯಾಗಬೇಕಿತ್ತು. ಆದರೆ ಆಗಲಿಲ್ಲ.  ಹಾಗೆಂದು ತಮಗೆ ಅಸಮಾಧಾನವಿಲ್ಲ. ನಾನು  ಪಕ್ಷಕ್ಕಾಗಿ ತ್ಯಾಗ ಮಾಡಿದ್ದೇನೆ ಎಂದರು. 

ಶ್ರೀರಾಮುಲು ಅವರ ವಿಚಾರದಲ್ಲಿ ಸರ್ಕಾರದ ಮಟ್ಟದಲ್ಲಿ ಸಮಸ್ಯೆ ಇರುವುದು ಸತ್ಯ. ಸಮಸ್ಯೆಯನ್ನು ಮುಖ್ಯಮಂತ್ರಿ ಬಗೆಹರಿಸಲಿದ್ದಾರೆ. ಯಡಿಯೂರಪ್ಪ ಅವರು ಸರ್ಕಾರವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಬಿಜೆಪಿ ಸರ್ಕಾರ ರಚನೆಗಾಗಿ 17 ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ಕೊಟ್ಟು ಬಂದಿದ್ದಾರೆ. ನಮಗೆ ಅವರು ಮುಖ್ಯ. ಬಿಜೆಪಿ ಸರ್ಕಾರಕ್ಕಾಗಿ ತ್ಯಾಗ ಮಾಡಿರುವವರ ರಕ್ಷಣೆ ನಮ್ಮ ಆದ್ಯತೆಯಾಗಬೇಕು ಎಂದು ಹೇಳುವ ಮೂಲಕ ಶ್ರೀರಾಮುಲು ಅಸಮಧಾನದ ಬಗ್ಗೆ ವ್ಯಂಗ್ಯವಾಗಿ ತಿರುಗೇಟು ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.