ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು ನನಗಲ್ಲ, ಹೈಕಾಂಡ್‌ಗೆ: ಬಿ.ಕೆ.ಹರಿಪ್ರಸಾದ್
ಹೃದಯಕ್ಕೆ ಸ್ಟಂಟ್ ಅಳವಡಿಸಿಕೊಂಡ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆ ಸೇರಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಎಐಸಿಸಿ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಬೆಂಗಳೂರು: ಹೃದಯಕ್ಕೆ ಸ್ಟಂಟ್ ಅಳವಡಿಸಿಕೊಂಡ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆ ಸೇರಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಎಐಸಿಸಿ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಅಲ್ಲದೆ ಪಕ್ಷದ ಇತ್ತೀಚಿನ ಬೆಳವಣಿಗೆಗಳು ಹಾಗೂ ಶಾಸಕಾಂಗ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರಗಳ ಕುರಿತಂತೆಯೂ ಚರ್ಚಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ರಾಜೀನಾಮೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಪಕ್ಷ ಸಂಘಟನೆಗೆ ವರಿಷ್ಠರು ಸೂಕ್ತ ಕಾರ್ಯ ಯೋಜನೆಗಳನ್ನು ರೂಪಿಸಲಿದ್ದಾರೆ ಎಂದರು.
ಮೂಲ ಕಾಂಗ್ರೆಸಿಗರಿಂದ ಸಿದ್ದರಾಮಯ್ಯ ಅವರಿಗೆ ತೊಂದರೆಯಾಗಿದೆ ಎಂದು ಮಾಧ್ಯಮಗಳಲ್ಲಿ ಇಲ್ಲಸಲ್ಲದ ಸುದ್ದಿಯಾಗಿತ್ತು. ಹೀಗಾಗಿ ಅದಕ್ಕೆಲ್ಲ ತೆರೆ ಎಳೆಯಲೆಂದೇ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದೇನೆ ಎಂದರು.
ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿರುವುದು ಪಕ್ಷದ ಹೈಕಮಾಂಡ್‌ಗೆ ಹೊರತು ತಮಗಲ್ಲ. ಕೆಪಿಸಿಸಿ ಹಾಗೂ ಶಾಸಕಾಂಗ ಪಕ್ಷದ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ. ಹೈಕಮಾಂಡ್ ಸೂಚಿಸಿದಂತೆ ನಾವು ನಡೆಯುವುದಾಗಿ ಹೇಳಿದರು.
ಮಾಧ್ಯಮಗಳ ಮುಂದೆ ರಾಜಕಾರಣ ಮಾಡುವುದಲ್ಲ. ರಾಜಕಾರಣ ಎನ್ನುವುದು ಅದರ ಪಾಡಿಗೆ ಅದು ನಡೆಯುತ್ತಿರುತ್ತದೆ ಎಂದು ಪ್ರಶ್ನೆಯೊಂದಕ್ಕೆ ಹರಿಪ್ರಸಾದ್ ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ ಉಪ ಚುನಾವಣೆಯಲ್ಲಿ ಸೋತಿದೆ. ಸೋಲು ಎಂದರೆ ಸೋಲಷ್ಟೆ. ಪಕ್ಷಕ್ಕಾಗಿ ಯಾರೆಲ್ಲ ಕೆಲಸ ಮಾಡಿದ್ದಾರೆ, ಮಾಡಿಲ್ಲ ಎನ್ನುವುದು ಗೊತ್ತಿರುವ ವಿಷಯವೇ. ಕೆಲಸ ಮಾಡುವುದು ಬಿಡುವುದು ಬೇರೆ ವಿಚಾರ. ಏನೇ ಆದರೂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದೆ. ಅದನ್ನು ಒಪ್ಪಿಕೊಂಡು ಆತ್ಮಾವಲೋಕನ ಮಾಡಿಕೊಂಡು ಮುಂದೆ ನಡೆಯುತ್ತಿರಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


