ಜಲಸಂಪನ್ಮೂಲ ಖಾತೆಗೆ ಬೇಡಿಕೆ ಇಟ್ಟಿಲ್ಲ: ಗೃಹ ಸಚಿವ ಬೊಮ್ಮಾಯಿ
ಜಲಸಂಪನ್ಮೂಲ ಖಾತೆ ಬೇಕೆಂದು ನಾನು ಮುಖ್ಯಮಂತ್ರಿಯವರ ಮುಂದೆ ಬೇಡಿಕೆ ಇಟ್ಟಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಜಲಸಂಪನ್ಮೂಲ ಖಾತೆ ಬೇಕೆಂದು ನಾನು ಮುಖ್ಯಮಂತ್ರಿಯವರ ಮುಂದೆ ಬೇಡಿಕೆ ಇಟ್ಟಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಖಾತೆಗಳಿಗೂ ಬೇಡಿಕೆ ಇಟ್ಟಿಲ್ಲ. ಊಹಾಪೋಹದ ಪ್ರಶ್ನೆಗಳಿಗೆ ನಾನು ಉತ್ತರಿಸುವುದಿಲ್ಲ. ನಾನು ಯಾವತ್ತು ಯಾವುದೇ ಖಾತೆಯನ್ನು ಕೇಳಿಯೇ ಇಲ್ಲ. ಈಗಿರುವ ಗೃಹ ಖಾತೆಯನ್ನು ನಾನು ಕೇಳಿಲ್ಲ. ಜಲ ಸಂಪನ್ಮೂಲ ಖಾತೆ ಬೇಕು ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ ಎಂದು ತಿಳಿಸಿದರು.
ರಾಷ್ಟ್ರೀಯ ಪೌರತ್ವ ಕಾಯ್ದೆ ಸಂಸತ್ತಿನ ಉಭಯ ಸದನಗಳಲ್ಲಿ ಅನುಮೋದನೆಗೊಂಡು, ರಾಷ್ಟ್ರಪತಿಯವರ ಅಂಕಿತವೂ ದೊರಕಿದೆ. ಮೇಲಾಗಿ ಇದು ಕೇಂದ್ರ ಸರ್ಕಾರದ ಪಟ್ಟಿಯಲ್ಲಿದೆ. ಹಾಗಾಗಿ ಎಲ್ಲ ರಾಜ್ಯಗಳಲ್ಲೂ ಕಾಯ್ದೆಯನ್ನು ಜಾರಿಗೊಳಿಸಲೇಬೇಕು ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದರು.
ಕೆಲವು ರಾಜ್ಯಗಳು ರಾಜಕೀಯ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿವೆ. ಅಸ್ಸಾಂ, ದೆಹಲಿ, ಉತ್ತರ ಪ್ರದೇಶಗಳಂತೆ ಇಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಆಗುವುದಿಲ್ಲ ಎಂಬ ವಿಶ್ವಾಸವಿದೆ. ಈ ಸಂಬಂಧ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


