ಮತ್ತೊಂದು ಸುತ್ತಿನ 'ಆಪರೇಷನ್ ಕಮಲ' ಭೀತಿ, ಯಾರೂ ಪಕ್ಷ ತೊರೆಯುವುದಿಲ್ಲ- ಜೆಡಿಎಸ್
ಮತ್ತೊಂದು ಸುತ್ತಿನ ಆಫರೇಷನ್ ಕಮಲ ನಡೆಯಲಿದ್ದು, ಜೆಡಿಎಸ್ ಪಕ್ಷದ ಮತ್ತೊಂದಿಷ್ಟು ಶಾಸಕರು ಬಿಜೆಪಿಗೆ ಜಿಗೆಯಲಿದ್ದಾರೆ ಎಂಬ ಭೀತಿ ನಡುವೆ ಯಾರೂ ಕೂಡಾ ಪಕ್ಷ ತೊರೆಯುವುದಿಲ್ಲ ಎಂದು ಜೆಡಿಎಸ್ ಸ್ಪಷ್ಟಪಡಿಸಿದೆ.

ಬೆಂಗಳೂರು: ಮತ್ತೊಂದು ಸುತ್ತಿನ ಆಫರೇಷನ್ ಕಮಲ ನಡೆಯಲಿದ್ದು, ಜೆಡಿಎಸ್ ಪಕ್ಷದ ಮತ್ತೊಂದಿಷ್ಟು ಶಾಸಕರು ಬಿಜೆಪಿಗೆ ಜಿಗೆಯಲಿದ್ದಾರೆ ಎಂಬ ಭೀತಿ ನಡುವೆ ಯಾರೂ ಕೂಡಾ ಪಕ್ಷ ತೊರೆಯುವುದಿಲ್ಲ ಎಂದು ಜೆಡಿಎಸ್ ಸ್ಪಷ್ಟಪಡಿಸಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಯಾರೂ ಕೂಡಾ ಪಕ್ಷ ತೊರೆಯವುದಿಲ್ಲ , ಬಿಜೆಪಿ ಸೇರುವವರ ಬಗ್ಗೆ ಕೆ. ಆರ್. ಪೇಟೆ ಶಾಸಕ ನಾರಾಯಣಗೌಡ ಮಾಹಿತಿ ನೀಡಲಿ ಎಂದರು.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಕೆ. ಕುಮಾರಸ್ವಾಮಿ, ಯಾರೊಬ್ಬರು ಪಕ್ಷ ಬಿಡುವುದಿಲ್ಲ. ಬಿಜೆಪಿಗೆ ಮತ್ತಷ್ಟು ಶಾಸಕರ ಅಗತ್ಯವೂ ಇಲ್ಲ. ಇನ್ನೂ ಯಾರಾದರೂ ಹೋದರೆ, ಅವರಿಗಿಂತ ದೊಡ್ಡ ಮೂರ್ಖರಾಗಲು ಯಾರೂ ಸಾಧ್ಯವಿಲ್ಲ ಎಂದರು. ಈ ಮಧ್ಯೆ ಇತ್ತೀಚಿನ ಉಪ ಚುನಾವಣೆಯಲ್ಲಿ ಪಕ್ಷ ಸೋಲಿನ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದೆ.
ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇಂದು ಬೆಂಗಳೂರು ನಗರಕ್ಕೆ ಆಗಮಿಸುವ ಸಾಧ್ಯತೆ ಇದೆ. ಅವರ ಬಂದ ನಂತರವೇ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


