ರಾಜಕೀಯ

ಜನರ ಗಮನ ಬೇರೆಡೆಗೆ ಸೆಳೆಯಲು ಬಿಜೆಪಿ 'ಪಾಕಿಸ್ತಾನ ಭಾಷೆ' ಹೇಳಿಕೆ ನೀಡಿದೆ: ಕಾಂಗ್ರೆಸ್

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಲುವಾಗಿ ಬಿಜೆಪಿ ನಾಯಕರು ಪಾಕಿಸ್ತಾನತ ಭಾಷೆ ಹೇಳಿಕೆಯನ್ನು ನೀಡಿದ್ದಾರೆಂದು ಕಾಂಗ್ರೆಸ್ ಹೇಳಿದೆ.

ಜನರ ಗಮನ ಬೇರೆಡೆಗೆ ಸೆಳೆಯಲು ಬಿಜೆಪಿ 'ಪಾಕಿಸ್ತಾನ ಭಾಷೆ' ಹೇಳಿಕೆ ನೀಡಿದೆ: ಕಾಂಗ್ರೆಸ್
ಸಂಗ್ರಹ ಚಿತ್ರd
Published On :

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಲುವಾಗಿ ಬಿಜೆಪಿ ನಾಯಕರು ಪಾಕಿಸ್ತಾನತ ಭಾಷೆ ಹೇಳಿಕೆಯನ್ನು ನೀಡಿದ್ದಾರೆಂದು ಕಾಂಗ್ರೆಸ್ ಹೇಳಿದೆ. 

ಈ ಕುರಿತು ಸುದ್ದಿಗೌಷ್ಠಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ಎಂಎಲ್'ಸಿ ಇವಾನ್ ಡಿಸೋಜಾ ಅವರು, ಪೌರತ್ವ ಕಾಯ್ದೆ. ಸಂವಿಧಾನದ ಮೂಲಭೂತಗಳಿಗೆ ವಿರುದ್ಧವಾಗಿದೆ. ಕಾಯ್ದೆ ವಿರುದ್ಧ ಇಡೀ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಪೊಲೀಸರು ಬಸ್ ಬಳಿಗೆ ಬೆಂಕಿ ಹಚ್ಚುವುದರಲ್ಲಿ ಹಾಗೂ ವಿದ್ಯಾರ್ಥಿಹಗಳ ಮೇಲೆ ದೌರ್ಜನ್ಯವೆಸಗಲು ವಿಶ್ವವಿದ್ಯಾಲಗಳಿಗೆ ನುಗ್ಗುವುದರಲ್ಲಿ ಕಾರ್ಯಮಗ್ನರಾಗಿದ್ದಾರೆಂದು ಹೇಳಿದ್ದಾರೆ. 

ಇದರಂತೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಿಡಿಕಾರಿದ ಅವರು, ಬಿಜೆಪಿ ನಾಯಕರು ಗುಜರಾತ್ ರಾಜ್ಯದಂತೆಯೇ ದೇಶದಾದ್ಯಂತ ಒಂದೇ ಮಾದರಿಯನ್ನೇ ಬಳಕೆ ಮಾಡುತ್ತಿದ್ದಾರೆಂದು ಹೇಳಿದ್ದಾರೆ. 

ಕೆಪಿಸಿಸಿ ಕಾರ್ಯಾಕಾರಿ ಅಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಬಿಜೆಪಿ ಜನರ ಹಾದಿ ತಪ್ಪಿಸುತ್ತಿದೆ. ವಿರೋಧ ಪಕ್ಷಗಳು ಪಾಕಿಸ್ತಾನ ಭಾಷೆಯಲ್ಲಿ ಮಾತನಾಡುತ್ತಿವೆ ಎಂದು ಹೇಳುವ ಮೂಲಕ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಯತ್ನಿಸುತ್ತಿದ್ದಾರೆಂದು ಹೇಳಿದ್ದಾರೆ. 

ತಮ್ಮ ರಾಜಕೀಯ ಲಾಭಕ್ಕಾಗಿ ದೇಶವನ್ನು ಬಿಜೆಪಿ ಇಬ್ಬಾಗ ಮಾಡುತ್ತಿದೆ. ವಿಷದ ಬೀಜ ಬಿತ್ತುದೆ. ಕಾಂಗ್ರೆಸ್ ಸದಾಕಾಲ ಜನರನ್ನು ಒಗ್ಗೂಡಿಸಲು ಕಾರ್ಯನಿರ್ವಹಿಸಿತ್ತು. ಕಾಂಗ್ರೆಸ್ ತಾಲಿಬಾನ್'ಗೆ ಹೋಲಿಕೆ ಮಾಡಿದ್ದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.