ರಾಜಕೀಯ

'ದಮನಿಸಿದಷ್ಟು ಜನಾಕ್ರೋಶ ಪುಟಿದೇಳುತ್ತದೆ: ಇದೊಂದು ಪುಕ್ಕಲು ರಾಜ್ಯ ಸರ್ಕಾರ'

ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಭುಗಿಲೆದ್ದಿರುವ ಪ್ರತಿರೋಧವನ್ನು ದಮನಿಸಲು ನಿಷೇಧಾಜ್ಞೆ ಹೇರಿರುವ ಪುಕ್ಕಲು ರಾಜ್ಯ ಸರ್ಕಾರ ಜನಶಕ್ತಿಗೆ ಹೆದರಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

'ದಮನಿಸಿದಷ್ಟು ಜನಾಕ್ರೋಶ ಪುಟಿದೇಳುತ್ತದೆ: ಇದೊಂದು ಪುಕ್ಕಲು ರಾಜ್ಯ ಸರ್ಕಾರ'
ಯಡಿಯೂರಪ್ಪ
Published On :

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಭುಗಿಲೆದ್ದಿರುವ ಪ್ರತಿರೋಧವನ್ನು ದಮನಿಸಲು ನಿಷೇಧಾಜ್ಞೆ ಹೇರಿರುವ ಪುಕ್ಕಲು ರಾಜ್ಯ ಸರ್ಕಾರ ಜನಶಕ್ತಿಗೆ ಹೆದರಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೆಲವು ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿರುವ ಕಾರಣ ರಾಜ್ಯದ ಹಲೆವೆಡೆ  ಸರ್ಕಾರ ನಿಷೇಧಾಜ್ಞೆ ಜಾರಿ ಮಾಡಿದೆ, ಇದನ್ನು ವಿರೋಧಿಸಿ ಅವರು ಟ್ವೀಟ್‌ ಮಾಡಿದ್ದಾರೆ.

ಇದೊಂದು ಪುಕ್ಕಲು ರಾಜ್ಯ ಸರ್ಕಾರ. ಜನಶಕ್ತಿಗೆ ಹೆದರಿ ನಿಷೇಧಾಜ್ಞೆ ಜಾರಿ ಮಾಡಿದೆ’ ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ಯಡಿಯೂರಪ್ಪನವರು ಪ್ರಧಾನಿ ನರೇಂದ್ರ ಮೋದಿ ಅವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ನಿಮಗಿಂತ ಅವರೇ ಎಷ್ಟೋ ಉತ್ತಮ. ನಾಚಿಕೆಯಾಗಬೇಕು ನಿಮಗೆ ‘ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭುಗಿಲೆದ್ದಿರುವ ಪ್ರತಿರೋಧವನ್ನು ದಮನಿಸಲು ನಿಷೇಧಾಜ್ಞೆ ಅಸ್ತ್ರವನ್ನು ಬಳಸುತ್ತಿದ್ದಾರೆ. ದಮನಿಸಿದಷ್ಟು ಜನಾಕ್ರೋಶ ಪುಟಿದೆದ್ದು ಬರುತ್ತದೆ,

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.