ಅತಿ ಶೀಘ್ರದಲ್ಲಿ ಜನ ನಿಮಗೆ ನನ್ನ ಅಡ್ರೆಸ್ ತೋರಿಸ್ತಾರೆ- ಬಿಎಸ್ ವೈಗೆ ಎಚ್ ಡಿಕೆ ತಿರುಗೇಟು!
ನನ್ನ ಅಡ್ರೆಸ್ ತೋರಿಸುವುದು ಈ ನೆಲ, ಈ ರಾಜ್ಯದ ಜನ. ಅತಿ ಶೀಘ್ರದಲ್ಲಿ ನಿಮಗೆ ನನ್ನ ಅಡ್ರೆಸ್ ತೋರಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ನನ್ನ ಅಡ್ರೆಸ್ ತೋರಿಸುವುದು ಈ ನೆಲ, ಈ ರಾಜ್ಯದ ಜನ. ಅತಿ ಶೀಘ್ರದಲ್ಲಿ ನಿಮಗೆ ನನ್ನ ಅಡ್ರೆಸ್ ತೋರಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.
ಟ್ವಿಟರ್ ಮೂಲಕ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಎಚ್ ಡಿ ಕುಮಾರ ಸ್ವಾಮಿ,ನನ್ನ ಅಡ್ರೆಸ್ ಬಗ್ಗೆ ನೀವು ಮಾತನಾಡಿದ್ದೀರಿ. ಮುಖ್ಯ ಮಂತ್ರಿಗೆ ನನ್ನ ಅಡ್ರೆಸ್ ತೋರಿಸುವುದು ಈ ನೆಲ,ಈ ಜನ. ಅತೀ ಶೀಘ್ರದಲ್ಲೇ ಜನ ನಿಮಗೆ ನನ್ನ ಅಡ್ರೆಸ್ ತೋರಿಸುತ್ತಾರೆ ಎಂದಿದ್ದಾರೆ.
ಅಷ್ಟಕ್ಕೂ 2006ರಲ್ಲಿ ಒಂದು ಸಚಿವ ಸ್ಥಾನಕ್ಕಾಗಿ ನನ್ನ ‘ಅಡ್ರೆಸ್’ಹುಡುಕಿಕೊಂಡು ಬಂದವರು ನೀವೇ ಅಲ್ಲವೇ? ನೆನಪಿಲ್ಲದಿದ್ದರೆ ಒಂದು ಬಾರಿ ನೆನಪಿಸಿಕೊಳ್ಳಿ ಎಂದು ಮುಖ್ಯಮಂತ್ರಿಗೆ ಟಾಂಗ್ ನೀಡಿದ್ದಾರೆ
ಮೂರುವರೆ ವರ್ಷ ನಾನೇ ಸಿಎಂ, ಕುಮಾರಸ್ವಾಮಿ ಅಡ್ರೆಸ್ ಗೆ ಇಲ್ಲದಂತಾಗಿದ್ದಾರೆ ಎಂದಿದ್ದಾರೆ ಬಿಎಸ್ ವೈ. ಶತಮಾನಗಳ ಕಾಲ ಭಾರತವನ್ನು ದಾಸ್ಯದಲ್ಲಿಟ್ಟುಕೊಂಡ ಬ್ರಿಟಿಷರ ಅಂಕುಶವಿಲ್ಲದಂತಿದ್ದ ಸಾಮ್ರಾಜ್ಯವನ್ನೇ ಈ ನೆಲದ ಜನ ಕೊನೆಗಾಣಿಸಿದ್ದಾರೆ. ಇನ್ನು ನಿಮ್ಮ ಮೂರು ವರ್ಷ ಯಾವ ಲೆಕ್ಕ ಎಂದಿದ್ದಾರೆ.
ಅಧಿಕಾರದ ಮದದಲ್ಲಿ ಆಣೆಗಳನ್ನಿಟ್ಟವರನ್ನೇ ನಮ್ಮ ಜನ ಬಿಟ್ಟಿಲ್ಲ. ಅವರಿಗೆ ನನ್ನ ಅಡ್ರಸ್ ತೋರಿಸಿದ್ದಾರೆ. ಇನ್ನು ನೀವು ಅಡ್ರೆಸ್ ಕೇಳಿದಾಗ್ಯೂ ಜನ ನನ್ನ ಅಡ್ರಸ್ ತೋರಿಸದೆ ಬಿಟ್ಟಾರೆಯೇ? ಎಚ್ಚರದಿಂದಿರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


