ಸೋ ಕಾಲ್ಡ್ ಹೋರಾಟಗಾರ ಯಡಿಯೂರಪ್ಪರದ್ದು ಕೊಲೆಗಡುಕ ಸರ್ಕಾರ-ಎಚ್. ಡಿ. ಕುಮಾರಸ್ವಾಮಿ
ಯಡಿಯೂರಪ್ಪಗೆ ನಿಜವಾಗಿಯೂ ಹೋರಾಟಗಾರರಾಗಿದ್ದರೆ ಪರಿಹಾರ ಮಂಜೂರು ಮಾಡಲಿ. ಇಲ್ಲವೇ ತಮ್ಮದು ಕೊಲೆಗಡುಕ ಸರ್ಕಾರ ಎಂದು ಒಪ್ಪಲಿ ಎಂದು ಎಚ್ ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳೂರಿಗೆ ಭೇಟಿ ನೀಡಿದಂದೇ ಗೋಲಿಬಾರಿಗೆ ಬಲಿಯಾದವರು ಗಲಭೆಯಲ್ಲಿ ಭಾಗಿಯಾದವರು ಎಂದು ಪೊಲೀಸರು ಯಡಿಯೂರಪ್ಪನವರಿಗೆ ಮಾಹಿತಿ ನೀಡಿರಲಿಲ್ಲವೇ? ಅಂದು ಯಡಿಯೂರಪ್ಪನವರಿಗೆ ಆ ಎಡಿಟೆಡ್ ವೀಡಿಯೋ ತೋರಿಸಿರಲಿಲ್ಲವೇ? ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಅಭಿಪ್ರಾಯ ಭೇದವನ್ನು ಬಿಜೆಪಿ ಸಹಿಸುವುದಿಲ್ಲ. ಹೋರಾಟಗಳನ್ನು, ಹೋರಾಟಗಾರರನ್ನು 'ಸೋ ಕಾಲ್ಡ್ ಹೋರಾಟಗಾರ' ಯಡಿಯೂರಪ್ಪ ಸಹಿಸುವುದಿಲ್ಲ. ಯಡಿಯೂರಪ್ಪಗೆ ನಿಜವಾಗಿಯೂ ಹೋರಾಟಗಾರರಾಗಿದ್ದರೆ ಪರಿಹಾರ ಮಂಜೂರು ಮಾಡಲಿ. ಇಲ್ಲವೇ ತಮ್ಮದು ಕೊಲೆಗಡುಕ ಸರ್ಕಾರ ಎಂದು ಒಪ್ಪಲಿ ಎಂದು ಸವಾಲು ಹಾಕಿದ್ದಾರೆ.
ಸತ್ತವರ ಹೆಸರು ಆರೋಪಿಗಳ ಪಟ್ಟಿಯಲ್ಲಿದೆ ಎಂದು ಪರಿಹಾರ ವಂಚನೆಗೆ ಯಡಿಯೂರಪ್ಪ ನೀಡಿರುವ ಸಬೂಬು ಎಂತಹ ಕ್ಷುಲ್ಲಕ ? ಹೋರಾಟ ಅಪರಾಧವೇ ? ಹೋರಾಟ ಸಂವಿಧಾನ ಬದ್ಧ ಹಕ್ಕು. ಹೋರಾಟಗಳನ್ನು ಹತ್ತಿಕ್ಕುವವರು ಸಂವಿಧಾನ ವಿರೋಧಿಗಳು ದೇಶಭ್ರಷ್ಟರು.ಆಡಳಿತದಲ್ಲಿ ಜನರಿಗೆ, ಹೋರಾಟಗಾರರಿಗೆ ರಕ್ಷಣೆ ಇಲ್ಲ. ಎಷ್ಟೇ ಆದರೂ ಇದು ಅನರ್ಹ ಸರ್ಕಾರವಲ್ಲವೇ? ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಕುಟುಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


