ಮಂಗಳೂರು ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ ಪರಿಹಾರ ಕೊಡಬೇಕು: ಬಿ. ರಾಮುಲು
ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟಿರುವವರಿಗೆ ಘೋಷಿಸಲಾಗಿದ್ದು ಪರಿಹಾರವನ್ನು ನೀಡಲಾಗುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಇದಕ್ಕೆ ಭಿನ್ನ ರಾಗ ತೆಗೆದಿರುವ ಸಚಿವ ಬಿ. ಶ್ರೀರಾಮುಲು ಅವರು ಪರಿಹಾರ ಕೊಡಲೇಬೇಕು ಎಂದು ಆಗ್ರಹಿಸಿದ್ದಾರೆ.

ರಾಯಚೂರು: ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟಿರುವವರಿಗೆ ಘೋಷಿಸಲಾಗಿದ್ದು ಪರಿಹಾರವನ್ನು ನೀಡಲಾಗುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಇದಕ್ಕೆ ಭಿನ್ನ ರಾಗ ತೆಗೆದಿರುವ ಸಚಿವ ಬಿ. ಶ್ರೀರಾಮುಲು ಅವರು ಪರಿಹಾರ ಕೊಡಲೇಬೇಕು ಎಂದು ಆಗ್ರಹಿಸಿದ್ದಾರೆ.
ಶ್ರೀರಾಮುಲು ಹೇಳಿಕೆ ಇದೀಗ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಮಂಗಳೂರು ಹಿಂಸಾಚಾರದ ವೇಳೆ ನೌಶೀನ್ ಮತ್ತು ಜಲೀಲ್ ಎಂಬುವರು ಮೃತಪಟ್ಟಿದ್ದರು. ಇದೀಗ ಪೊಲೀಸರು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನೌಶೀನ್ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿರುವುದು ವಿಡಿಯೋದಲ್ಲಿ ಗೊತ್ತಾಗಿದ್ದರಿಂದ ಯಡಿಯೂರಪ್ಪನವರು ಪರಿಹಾರವನ್ನು ಹಿಂಪಡೆದಿದ್ದರು.
ಈ ಕುರಿತು ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು ಮೃತರ ಕುಟುಂಬಗಳಿಗೆ ಪರಿಹಾರ ನೀಡಲೇಬೇಕು ಎಂದು ಆಗ್ರಹ ಮಾಡಿದ್ದಾರೆ. ಇದರ ಜೊತೆಗೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ತನಿಖೆಯಲ್ಲಿ ಎಲ್ಲವೂ ಗೊತ್ತಾಗುತ್ತದೆ. ಈ ನಂತರ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


