ಸಾರಾ ಮಹೇಶ್ ಏನು ಹೇಳುತ್ತಾರೋ, ಕುಮಾರಸ್ವಾಮಿ ಅವರು ಅದನ್ನೇ ಮಾಡುತ್ತಾರೆ!
ಮೈಸೂರಿನಲ್ಲಿ ಸಾರಾ ಮಹೇಶ್ ಅವರು ಏನು ಹೇಳುತ್ತಾರೋ, ಕುಮಾರಸ್ವಾಮಿ ಅವರು ಅದನ್ನೇ ಮಾಡಿಕೊಂಡು ಬರುತ್ತಿದ್ದಾರೆ.

ಮೈಸೂರು: ಮೈಸೂರಿನಲ್ಲಿ ಸಾರಾ ಮಹೇಶ್ ಅವರು ಏನು ಹೇಳುತ್ತಾರೋ, ಕುಮಾರಸ್ವಾಮಿ ಅವರು ಅದನ್ನೇ ಮಾಡಿಕೊಂಡು ಬರುತ್ತಿದ್ದಾರೆ.
ಮೈಸೂರು ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಸ್ಥಾನಕ್ಕೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ. ಸದ್ಯ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಪಾಲಿಕೆಯಲ್ಲಿ ಆಡಳಿತ ನಡೆಸುತ್ತಿದ್ದು, ಒಪ್ಪಂದದ ಪ್ರಕಾರ ಈ ಬಾರಿ ಜೆಡಿಎಸ್ ಪಕ್ಷಕ್ಕೆ ಮೇಯರ್ ಸ್ಥಾನ ಸಿಗುತ್ತಿದೆ.
ಹೀಗಾಗಿ, ಜೆಡಿಎಸ್‍ನಲ್ಲಿ ಬಿರುಸಿನ ರಾಜಕೀಯ ಶುರುವಾಗಿದೆ. ಆದರೆ ಆರಂಭದಲ್ಲೆ ನನಗೂ ಇದಕ್ಕೂ ಸಂಬಂಧ ಇಲ್ಲ. ಪಕ್ಷ ಹೇಳಿದವರಿಗೆ ನಾನು ನನ್ನ ಮತ ಹಾಕಿ ಬರುತ್ತೇನೆ ಅಷ್ಟೇ ಎಂದು ಜಿಟಿಡಿ ಹೇಳಿದ್ದು, ಈ ಹೇಳಿಕೆ ಜಿಟಿಡಿ, ಬೆಂಬಲಿಗ ಪಾಲಿಕೆ ಸದಸ್ಯರಲ್ಲಿ ಆತಂಕ ಸೃಷ್ಟಿಸಿದೆ.
ನಾನು ಉಸ್ತುವಾರಿ ಸಚಿವನಾಗಿರಲಿ, ಮತದಾರನಾಗಿರಲಿ, ಯಾವತ್ತೂ ಅವರು ನನ್ನನ್ನು ಮೇಯರ್ ಚುನಾವಣೆಯಲ್ಲಿ ಪರಿಗಣಿಸಿಲ್ಲ. ಹಾಗಾಗಿ ಈಗಲೂ ಅವರೇ ಚುನಾವಣೆ ಮಾಡಲಿ. ಪಕ್ಷ, ಹೈಕಮಾಂಡ್ ಯಾರನ್ನು ಅಭ್ಯರ್ಥಿ ಮಾಡುತ್ತೋ. ಅವರಿಗೆ ವೋಟ್ ಹಾಕೋದಷ್ಟೇ ನನ್ನ ಕೆಲಸ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


