ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಸ್ಪರ್ಧಿಸಲಿ, ಪ್ರಜ್ವಲ್ ಸ್ಪರ್ಧೆ ಪ್ರಶ್ನಿಸಲು ಮಂಜು ಯಾರು ಎಂದ ರೇವಣ್ಣ!
ಕಾಂಗ್ರೆಸ್ನವರು ರಾಜ್ಯದ 28 ಲೋಕಸಭೆ ಕ್ಷೇತ್ರಗಳಿಂದಲೂ ಸ್ಪರ್ಧಿಸಲಿ, ನಾವೇನು ಅವರನ್ನು ಹಿಡಿದಿಟ್ಟುಕೊಂಡಿದ್ದೇವಾ ಎಂದು ಲೋಕೋಪಯೋಗಿ ...

Published On :
ಹಾಸನ/ ಬೆಂಗಳೂರು: ಕಾಂಗ್ರೆಸ್ನವರು ರಾಜ್ಯದ 28 ಲೋಕಸಭೆ ಕ್ಷೇತ್ರಗಳಿಂದಲೂ ಸ್ಪರ್ಧಿಸಲಿ, ನಾವೇನು ಅವರನ್ನು ಹಿಡಿದಿಟ್ಟುಕೊಂಡಿದ್ದೇವಾ ಎಂದು ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಪ್ರಶ್ನಿಸಿದ್ದಾರೆ
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ''ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ, ಸೋನಿಯಾ, ದಿನೇಶ್ ಗುಂಡೂರಾವ್ ಅವರ ಪಕ್ಷದ ಟಿಕೆಟ್ ಬಗ್ಗೆ ತೀರ್ಮಾನಿಸುತ್ತಾರೆ. ಅವರು ನಿಲ್ಲುವುದು ಬೇಡ ಎನ್ನಲು ನಾವ್ಯಾರು?
ನಮ್ಮ ಪಕ್ಷದಿಂದ ಸ್ಪರ್ದಿಸುತ್ತಾರೆ ಎಂಬುದರ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತು ಸಿಎಂ ಕುಮಾರಸ್ವಾಮಿ ನಿರ್ಧರಿಸಲಿದ್ದಾರೆ ಎಂದು ಕಿಡಿಕಾರಿದ್ದಾರೆ.
ತಮ್ಮ ಪುತ್ರ ಪ್ರಜ್ವಲ್ ರೇವಣ್ಣ ಅವರ ಸ್ಪರ್ಧೆ ಬಗ್ಗೆ ನಿರ್ಧರಿಸಿಲು ಕಾಂಗ್ರೆಸ್ ನವರು ಯಾರು? ಹಾಸನದಿಂದ ಪ್ರಜ್ವಲ್ ಸ್ಪರ್ಧಿಸಲು ನಾವು ಕಾಂಗ್ರೆಸ್ ನವರ ಅನುಮತಿ ಪಡೆಯುವ ಅಗತ್ಯವಿಲ್ಲ, ಜೆಡಿಎಸ್ ನಾಯಕರುಗಳ ಸ್ಪರ್ಧೆ ಬಗ್ಗೆ ಹೇಳಲು ಎ.ಮಂಜು ಯಾರು? ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷದ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಜೆಡಿಎಸ್ ವರಿಷ್ಠರು ಎಲ್ಲಾ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್loksabha electionಲೋಕಸಭೆ ಚುನಾವಣೆಎಚ್.ಡಿ ರೇವಣ್ಣH.d Revanna28 constituencies28 ಕ್ಷೇತ್ರಗಳು
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


