ಅಣ್ಣಾ, ಕುಮಾರಣ್ಣ, ಕಂಪ್ಲಿ ಶಾಸಕ ಗಣೇಶ್ ಬಂಧಿಸಿ, ನಿಮ್ಮ ಪೌರುಷ ತೋರಿಸಿ: ಸಿಎಂಗೆ ಬಿಜೆಪಿ ಸವಾಲು
ಭೂಗತ ಪಾತಕಿ ರವಿ ಪೂಜಾರಿ ಬಂಧನದ ಯಶಸ್ಸು ಸಮ್ಮಿಶ್ರ ಸರ್ಕಾರಕ್ಕೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೆ ರಾಜ್ಯ ಬಿಜೆಪಿ ಸಿಎಂ ಗೆ ಟಾಂಗ್ ನೀಡಿದೆ.

Published On :
ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಬಂಧನದ ಯಶಸ್ಸು ಸಮ್ಮಿಶ್ರ ಸರ್ಕಾರಕ್ಕೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೆ ರಾಜ್ಯ ಬಿಜೆಪಿ ಸಿಎಂ ಗೆ ಟಾಂಗ್ ನೀಡಿದೆ.
ಅಣ್ಣಾ ಕುಮಾರಣ್ಣ, ರವಿ ಪೂಜಾರಿಯನ್ನು ಬಂಧಿಸಿದ್ದು ನಮ್ಮ ಸಮ್ಮಿಶ್ರ ಸರ್ಕಾರವೇ ಎಂದು ತಮಗೆ ತಾವೇ ಕೀರ್ತಿ ಪಡೆಯುವ ಮೊದಲು, ಕಂಪ್ಲಿ ಶಾಸಕ ಗಣೇಶ್‌ರನ್ನು ಬಂಧಿಸಿ ನಿಮ್ಮ ಪೌರುಷ ತೋರಿಸಿ ಎಂದು ಸವಾಲು ಹಾಕಿದೆ,
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ನೇರವಾಗಿ ಸಿಎಂ ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದೆ, ಸಮ್ಮಿಶ್ರ ಸರ್ಕಾರ ರಚನೆ ಆದ ಆರಂಭದಲ್ಲೇ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿತ್ತು. ಆದರಲ್ಲಿ ರಾಜ್ಯ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ ಹಾಗೂ ಭಾರತದ ವಿದೇಶಾಂಗ ಇಲಾಖೆ ಪ್ರತಿನಿಧಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದೆ. ರವಿ ಪೂಜಾರಿ ಬಂಧನ ಸಮ್ಮಿಶ್ರ ಸರ್ಕಾರದ ಯಶಸ್ಸು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿArrestH.D Kumaraswamyಎಚ್.ಡಿ ಕುಮಾರಸ್ವಾಮಿಬಂಧನRavi pujariರವಿ ಪೂಜಾರಿGaneshಗಣೇಶ್ಕಂಪ್ಲಿ ಶಾಸಕCompli MLA
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


