ರಾಜಕೀಯ

ರಾಜಕೀಯಕ್ಕೆ ಬರುವುದಾದರೆ ಮಂಡ್ಯದಿಂದ ಮಾತ್ರ ಸ್ಪರ್ಧೆ: ಸುಮಲತಾ ಅಂಬರೀಶ್

ತಾವು ರಾಜಕೀಯಕ್ಕೆ ಬರುವುದಾದರೆ ಮಂಡ್ಯದಿಂದ ಮಾತ್ರ ಸ್ಪರ್ಧೆ ಮಾಡುತ್ತೇನೆ ಎಂದು ನಟಿ ಸುಮಲತಾ ಅಂಬರೀಶ್ ಹೇಳಿದ್ದಾರೆ.

ರಾಜಕೀಯಕ್ಕೆ ಬರುವುದಾದರೆ ಮಂಡ್ಯದಿಂದ ಮಾತ್ರ ಸ್ಪರ್ಧೆ: ಸುಮಲತಾ ಅಂಬರೀಶ್
ಸಂಗ್ರಹ ಚಿತ್ರ
Published On :
ಬೆಂಗಳೂರು: ತಾವು ರಾಜಕೀಯಕ್ಕೆ ಬರುವುದಾದರೆ ಮಂಡ್ಯದಿಂದ ಮಾತ್ರ ಸ್ಪರ್ಧೆ ಮಾಡುತ್ತೇನೆ ಎಂದು ನಟಿ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭೇಟಿ ಬಳಿಕ ಮಾತನಾಡಿದ ಸುಮಲತಾ ಅವರು, ರಾಜಕೀಯ ಪ್ರವೇಶಿಸುವ ಕುರಿತು ನಾನು ಈವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಕಾಂಗ್ರೆಸ್ ಮುಖಂಡರ ಸಲಹೆ ಪಡೆಯುತ್ತೇನೆ. ಪಕ್ಷದ ತೀರ್ಮಾನದ ಮೇಲೆ ನಾನು ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದಾರೆ.
ಅಂತೆಯೇ ರಾಜಕೀಯ ಅನ್ನೋದು ಅಷ್ಟು ಸುಲಭದ ವಿಷಯ ಅಲ್ಲ. ಅಂಬರೀಷ್ ಕಾಂಗ್ರೆಸ್‌ನಿಂದಲೇ ಗುರುತಿಸಿಕೊಂಡವರು. ಹಾಗಾಗಿ ಕಾಂಗ್ರೆಸ್ ಮುಖಂಡರ ಸಲಹೆ ಪಡೆಯುತ್ತೇನೆ. ನಮ್ಮದೂ ಕಾಂಗ್ರೆಸ್ ಪಕ್ಷವೇ, ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದನ್ನು ನೋಡಿ ತೀರ್ಮಾನ ತೆಗೆದುಕೊಳ್ಳುತ್ತೇನೆ. ಈಗ ಯಾವುದೇ ವಿವಾದ ಬೇಡ. ನನಗೆ ರಾಜಕೀಯಕ್ಕೆ ಬರುವ ವಿಚಾರ ಇರಲಿಲ್ಲ. ಒಂದು ವೇಳೆ ನಾನು ರಾಜಕೀಯಕ್ಕೆ ಬರುವುದೇ ಆದರೆ ಅದು ಮಂಡ್ಯದಿಂದ ಮಾತ್ರ. ಕಾಂಗ್ರೆಸ್‌ ಕಾರ್ಯಕರ್ತರು ಬಂದು ಚುನಾವಣೆಗೆ ನಿಲ್ಲುವಂತೆ ಕೇಳಿದ್ದಾರೆ. ಅಭಿಮಾನಿಗಳ ಆಸೆ ನಮ್ಮ ಅವರ ಸಂಬಂಧ ಮುಂದುವರಿಯಬೇಕು ಎನ್ನುತ್ತಿದ್ದಾರೆ. ಈ ಜನರು ಅಂಬರೀಷ್ ಸಂಪಾದಿಸಿದ ಆಸ್ತಿ. ಇದನ್ನು ಕಳೆದುಕೊಳ್ಳಲು ಇಷ್ಟವಿಲ್ಲ. ರಾಜಕೀಯಕ್ಕೆ ಬರಬೇಕೆನ್ನುವ ಆಸೆ ಇಲ್ಲ. ಈಗ ನಾನು ಯೋಚನೆ ಮಾಡಬೇಕು. ಎಲ್ಲರ ಸಲಹೆಗಳನ್ನು ಪಡೆದು ತೀರ್ಮಾನ ಪ್ರಕಟಿಸುತ್ತೇನೆ ಎಂದರು.
ಇದೇ ವೇಳೆ ಬೆಂಗಳೂರಿನ ನಿವಾಸಕ್ಕೆ ತೆರಳಿದ್ದ ಕಾಂಗ್ರೆಸ್ ಕಾರ್ಯಕರ್ತರು ಮಂಡ್ಯದಿಂದ ಲೋಕಸಭೆಗೆ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ. ಸುಮಲತಾ ಅಂಬರೀಷ್ ಭೇಟಿಯಾದ ಮಂಡ್ಯ ಕೈ ಕಾರ್ಯಕರ್ತರು. ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ನೀವು ಮಂಡ್ಯದಿಂದಲೇ ಸ್ಪರ್ಧೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಸುಮಲತಾ ನಿವಾಸಕ್ಕೆ ಆಗಮಿಸಿದ ಕಾರ್ಯಕರ್ತರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.