ಕಾಂಗ್ರೆಸ್ ನಾಯಕರಿಗೆ ತಲೆನೋವಾದ 'ಸತೀಶ್ ಜಾರಕಿಹೊಳಿ ನಮ್ಮ ಸಿಎಂ' ಅಭಿಯಾನ
ಸಿದ್ದರಾಮಯ್ಯ ನಮ್ಮ ನಿಜವಾದ ಮುಖ್ಯಮಂತ್ರಿ ಎಂದು ಕೆಲವು ಕಾಂಗ್ರೆಸ್ ಶಾಸಕರು ಇತ್ತೀಚೆಗೆ ಹೇಳಿಕೆ...

Published On :
ಬೆಳಗಾವಿ: ಸಿದ್ದರಾಮಯ್ಯ ನಮ್ಮ ನಿಜವಾದ ಮುಖ್ಯಮಂತ್ರಿ ಎಂದು ಕೆಲವು ಕಾಂಗ್ರೆಸ್ ಶಾಸಕರು ಇತ್ತೀಚೆಗೆ ಹೇಳಿಕ ನೀಡಿದ್ದು ಮೈತ್ರಿಕೂಟದಲ್ಲಿ ಅಪಸ್ವರ ಏಳಲು ಕಾರಣವಾಗಿತ್ತು. ಇದೀಗ ಅರಣ್ಯ ಖಾತೆ ಸಚಿವ ಸತೀಶ್ ಜಾರಕಿಹೊಳಿ ಬೆಂಬಲಿಗರು ಸೋಷಿಯಲ್ ಮೀಡಿಯಾದಲ್ಲಿ #MyCMSatishJarakiholi ಎಂಬ ಅಭಿಯಾನ ಆರಂಭಿಸಿದ್ದು ಪಕ್ಷದ ನಾಯಕರಲ್ಲಿ ಹೊಸ ತಲೆನೋವನ್ನುಂಟುಮಾಡಿದೆ.
ಈ ಅಭಿಯಾನಕ್ಕೆ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಸೋಷಿಯಲ್ ಮೀಡಿಯಾದಲ್ಲಿ ಅಪಾರ ಬೆಂಬಲ ಸಿಕ್ಕಿದ್ದು ಫೇಸ್ ಬುಕ್, ವಾಟ್ಸಾಪ್ ಗಳಲ್ಲಿ ಹಲವರು ಸತೀಶ್ ಜಾರಕಿಹೊಳಿಯವರು ಉತ್ತರ ಕರ್ನಾಟಕದಿಂದ ಸಿಎಂ ಹುದ್ದೆಗೆ ಸೂಕ್ತ ಅಭ್ಯರ್ಥಿ ಎಂದು ಪ್ರತಿಕ್ರಿಯಿಸಿದ್ದಾರೆ.
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಲು ಅರ್ಹರು ಎಂದು ಹೇಳಿರುವುದಕ್ಕೆ ಪ್ರತಿಯಾಗಿ ಸತೀಶ್ ಜಾರಕಿಹೊಳಿ ಸಿಎಂ ಅಭ್ಯರ್ಥಿಯಾಗಲು ಸೂಕ್ತ ಮುಖಂಡ ಎಂದು ಉತ್ತರ ಕರ್ನಾಟಕದವರು ಹೇಳುತ್ತಿದ್ದಾರೆ.
ತಮ್ಮ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಬೆಂಬಲಿಗರು ಮಾಡುತ್ತಿರುವ ಪ್ರಚಾರಕ್ಕೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ನನಗೆ ಸಿಎಂ ಆಗಬೇಕೆಂಬ ಆಸೆ ಖಂಡಿತಾ ಇದೆ. ರಾಜಕೀಯದಲ್ಲಿ ಒಂದು ಹಂತಕ್ಕೆ ತಲುಪಿದಾಗ ಖಂಡಿತವಾಗಿಯೂ ಉನ್ನತ ಹುದ್ದೆ ವಹಿಸಬೇಕೆಂಬ ಆಸೆಯುಂಟಾಗುತ್ತದೆ. ನಾನು ಖಂಡಿತಾ ಸಿಎಂ ಆಕಾಂಕ್ಷಿಗಳ ಸ್ಥಾನದಲ್ಲಿದ್ದೇನೆ. ನನ್ನ ಬೆಂಬಲಿಗರು ಸೋಷಿಯಲ್ ಮೀಡಿಯಾದಲ್ಲಿ ಮಾಡುತ್ತಿರುವ ಅಭಿಯಾನ ಮುಂದಿನ ದಿನಗಳಲ್ಲಿ ಯಾವ ರೂಪ ಪಡೆದುಕೊಳ್ಳಲಿದೆ ಎಂದು ನೋಡೋಣ ಎಂದರು.
ಒಂದು ಕಾಲದಲ್ಲಿ ಸಿದ್ದರಾಮಯ್ಯನವರ ನಿಕಟವರ್ತಿಯಾಗಿದ್ದ ಸತೀಶ್ ಜಾರಕಿಹೊಳಿ ಇಂದು ಉತ್ತರ ಕರ್ನಾಟಕದಲ್ಲಿ ಅಪಾರ ಬೆಂಬಲಿಗರನ್ನು ಹೊಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


