ಮೈತ್ರಿ ಸರ್ಕಾರ ಅಸ್ಥಿರಗೊಳಿಸುವಲ್ಲಿ ಮೋದಿ ಪಾತ್ರವಿಲ್ಲ: ಪ್ರಧಾನಿ ಮೇಲೆ ದೇವೇಗೌಡ ಮೃದು ಧೋರಣೆ
ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರವಿಲ್ಲ. ಸರ್ಕಾರವನ್ನು ಬೀಳಿಸುವುದಕ್ಕೆ ರಾಜ್ಯ ಬಿಜೆಪಿ ನಾಯಕರು ಪ್ರಯತ್ನ...

Published On :
ಬೆಂಗಳೂರು: ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರವಿಲ್ಲ. ಸರ್ಕಾರವನ್ನು ಬೀಳಿಸುವುದಕ್ಕೆ ರಾಜ್ಯ ಬಿಜೆಪಿ ನಾಯಕರು ಪ್ರಯತ್ನ ಮಾಡುತ್ತಿದ್ದಾರೆ ಎಂದು ದೇವೇಗೌಡ ಅವರು ಹೇಳುವ ಮೂಲಕ ಪ್ರಧಾನ ಮೋದಿ ಬಗ್ಗೆ ಮೃದು ಧೋರಣೆ ತೋರಿದ್ದಾರೆ.
ಫೆ.8 ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಆಯವ್ಯಯ ಮಂಡನೆ ಮಾಡುತ್ತಿದ್ದು, ಕುಮಾರಸ್ವಾಮಿ ಮುಂಗಡಪತ್ರ ಮಂಡಿಸದಂತೆ ಮಾಡಲು ಒಂದೆಡೆ ಬಿಜೆಪಿ ತಂತ್ರ ರೂಪಿಸುತ್ತಿದ್ದು, ಮತ್ತೊಂದೆಡೆ ಅಧಿವೇಶನ ಸಂದರ್ಭದಲ್ಲಿ ಅತೃಪ್ತ ಶಾಸಕರು ಸದನಕ್ಕೆ ಗೈರಾಗುವ ಸಾಧ್ಯತೆಯಿದೆ. ಈ ಬಗ್ಗೆ ಏನು ಕ್ರಮಕೈಗೊಳ್ಳಬಹುದು, ಪ್ರತಿತಂತ್ರ ರೂಪಿಸುವ ಕುರಿತು ಕುಮಾರಸ್ವಾಮಿ ದೇವೇಗೌಡರೊಂದಿಗೆ ಚರ್ಚೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ ಅವರು, ಕೇವಲ 3 ದಿನ ಮಾತ್ರ ಮುಖ್ಯಮಂತ್ರಿಯಾಗಿದ್ದಕ್ಕೆ ಯಡಿಯೂರಪ್ಪ ಅವರ ಮನಸಿಗೆ ನೋವಾಗಿದೆ. ಹಾಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಲುಗಾಡಿಸಲು ಅವರು ಸ್ವಲ್ಪ ಪ್ರಯತ್ನ ನಡೆಸಿದ್ದಾರಷ್ಟೆ. ಇದರಲ್ಲಿ ಪ್ರಧಾನಿ ಮೋದಿ ಅವರ ಪಾತ್ರವಿದೆ ಎಂಬ ಬಗ್ಗೆ ತಮಗೆ ನಂಬಿಕೆಯಿಲ್ಲ ಎಂದರು.
ಲೋಕಸಭೆಗೆ ಪಕ್ಷ ಸಂಘಟನೆ ಮಾಡಲಾಗುತ್ತಿದ್ದು, ವಿಜಯಪುರದಲ್ಲಿ ಫೆ.10 ರಂದು ಪರಿಶಿಷ್ಟ ಜಾತಿ/ವರ್ಗ ಸಮಾವೇಶ, ಹುಬ್ಬಳ್ಳಿಯಲ್ಲಿ 12 ರಂದು ರೈತ ಸಮಾವೇಶ ನಡೆಸಲಾಗುವುದು ಎಂದು ದೇವೇಗೌಡ ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿKarnatakaಕರ್ನಾಟಕHD Devegowdacoalition governmentಹೆಚ್ ಡಿ ದೇವೇಗೌಡಸಮಿಶ್ರ ಸರ್ಕಾರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


