ಬಜೆಟ್ ಅಧಿವೇಶನಕ್ಕೆ ಕ್ಷಣಗಣನೆ ಆರಂಭ: ಕಾಂಗ್ರೆಸ್, ಬಿಜೆಪಿ ಶಾಸಕರಿಗೆ ವಿಪ್ ಜಾರಿ
ರಾಜ್ಯ ಬಜೆಟ್ ಅಧಿವೇಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಆಪರೇಷನ್ ಕಮಲದ ಭೀತಿಯಿಂದ ಪಾರಾಗಲು ಕಾಂಗ್ರೆಸ್ ತನ್ನ ಎಲ್ಲಾ ಶಾಸಕರಿಗೆ....

Published On :
ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಆಪರೇಷನ್ ಕಮಲದ ಭೀತಿಯಿಂದ ಪಾರಾಗಲು ಕಾಂಗ್ರೆಸ್ ತನ್ನ ಎಲ್ಲಾ ಶಾಸಕರಿಗೆ ಇ-ಮೇಲ್ ಹಾಗೂ ವಾಟ್ಸಪ್ ಮೂಲಕ ವಿಪ್ ಜಾರಿ ಮಾಡಿದೆ.
ಕಾಂಗ್ರೆಸ್ ಶಾಸಕರಿಗೆ ಕಡ್ಡಾಯವಾಗಿ ವಿಧಾನಸಭೆಗೆ ಹಾಜರಾಗುವಂತೆ ಪಕ್ಷದ ಶಾಸಕರಿಗೆ ಮುಖ್ಯ ಸಚೇತಕ ಗಣೇಶ್ ಹುಕ್ಕೇರಿ ವಿಪ್ ಜಾರಿಗೊಳಿಸಿದ್ದಾರೆ.
ಫೆ.6 ರಿಂದ 15 ರವರೆಗೆ ವಿಧಾನಸಭೆ ಅಧಿವೇಶನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಸಭಾಧ‍್ಯಕ್ಷರು ಕಲಾಪ ಆರಂಭಿಸಿ ಅಂತ್ಯಗೊಳಿಸುವವರೆಗೆ ಆಡಳಿತ ಪಕ್ಷದ ಎಲ್ಲಾ ಶಾಸಕರು ಕಡ್ಡಾಯವಾಗಿ ಉಪಸ್ಥಿತರಿದ್ದು, ಸರ್ಕಾರದ ಪರ ಮತ ಚಲಾಯಿಸುವಂತೆ ವಿಪ್ ಜಾರಿಮಾಡಲಾಗಿದೆ.
ಒಂದುವೇಳೆ ವಿಪ್ ಉಲ್ಲಂಘಿಸಿ, ಸದನಕ್ಕೆ ಗೈರು ಹಾಜರಾದರೆ ಅಂತಹ ಶಾಸಕರ ಸದಸ್ಯತ್ವವನ್ನು ಅನರ್ಹಗೊಳಿಸಲಾಗುವುದು ಎಚ್ಚರಿಕೆ ನೀಡಲಾಗಿದೆ.
ಇನ್ನು ಬಿಜೆಪಿ ಸಹ ತನ್ನ ಎಲ್ಲಾ ನಾಳೆ ಸದನದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಶಾಸಕರಿಗೆ ವಿಪ್ ಜಾರಿ ಮಾಡಿದೆ. ಆದರೆ ಜೆಡಿಎಸ್ ಮಾತ್ರ ವಿಪ್ ಜಾರಿ ವಿಚಾರದಲ್ಲಿ ನಿರಾಳವಾಗಿದೆ. ನಮ್ಮ ಶಾಸಕರ ಮೇಲೆ ನಂಬಿಕೆ ಇರೋದರಿಂದ ನಾವು ವಿಪ್ ಜಾರಿ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ನಮ್ಮ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಲ್ಲ, ಒಂದು ವೇಳೆ ಶಾಸಕರೇ ಒತ್ತಾಯಿಸಿದರೆ ವಿಪ್ ಜಾರಿ ಆಡುವ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


