ಜೆಡಿಎಸ್ ಶಾಸಕರನ್ನು ಭದ್ರವಾಗಿ ಹಿಡಿದಿಟ್ಟುಕೊಳ್ಳಿ : ದೇವೇಗೌಡರಿಗೆ ಯಡಿಯೂರಪ್ಪ ತಿರುಗೇಟು
ಮೈತ್ರಿ ಸರ್ಕಾರದ ವೈಫಲ್ಯ ಮುಚ್ಚಿಟ್ಟುಕೊಳ್ಳಲು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ ಅವರು ಮನಸ್ಸಿಗೆ ಬಂದಂತೆ ಹೇಳಿಕೆ ನೀಡುವುದು ಸರಿಯಲ್ಲ...

Published On :
ಬೆಂಗಳೂರು: ಮೈತ್ರಿ ಸರ್ಕಾರದ ವೈಫಲ್ಯ ಮುಚ್ಚಿಟ್ಟುಕೊಳ್ಳಲು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ ಅವರು ಮನಸ್ಸಿಗೆ ಬಂದಂತೆ ಹೇಳಿಕೆ ನೀಡುವುದು ಸರಿಯಲ್ಲ. ಸಮ್ಮಿಶ್ರ ಸರ್ಕಾರದ ಅಸ್ಥಿರತೆಗೆ ಬಿಜೆಪಿ ಯತ್ನಿಸಿಲ್ಲ. ತಮ್ಮ ಶಾಸಕರನ್ನು ಭದ್ರವಾಗಿ ಹಿಡಿದಿಟ್ಟುಕೊಳ್ಳಲು ಸಾಧ್ಯವಾಗದೆ ವೃಥಾ ಆರೋಪ ಮಾಡುವುದು ಸರಿಯಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಯಡಿಯೂರಪ್ಪ ಮಾಡುತ್ತಿದ್ದಾರೆಯೇ ಹೊರತು ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ಇಲ್ಲ' ಎಂದು ದೇವೇಗೌಡ ನಿನ್ನೆ ಹೇಳಿಕೆ ನೀಡಿದ್ದರು.
ದೇವೇಗೌಡರ ಹೇಳಿಕೆಗೆ ನಗರದಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಯಾವುದೇ ಕಾರಣಕ್ಕೂ ರಾಜ್ಯಪಾಲರ ಭಾಷಣಕ್ಕಾಗಲಿ ಬಜೆಟ್ ಮಂಡನೆಗಾಗಲಿ ಅಡ್ಡಿ ಮಾಡುತ್ತೇವೆ ಎಂದು ಹೇಳಿಕೆ ಕೊಡದಂತೆ ಬಿಜೆಪಿ ಶಾಸಕರಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ವಿಧಾನಮಂಡಲ ಅಧಿವೇಶನದಲ್ಲಿ ಪಕ್ಷದ ತಂತ್ರಗಾರಿಕೆ ಬಗ್ಗೆ ಶಾಸಕರ ಜತೆ ಸಭೆಯಲ್ಲಿ ಮಾತುಕತೆ ನಡೆಸಲಾಗಿದೆ.ಇಂದು ಮಧ್ಯಾಹ್ನ 3:30ಕ್ಕೆ ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಸಭೆ ಮತ್ತು ಕೋರ್ ಕಮಿಟಿ ಸಭೆ ನಡೆಯಲಿದ್ದು, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮಲಾಲ್ ಸಹ ಪಕ್ಷದ ಶಾಸಕರಿಗೆ ಮಾರ್ಗದರ್ಶನ ಮಾಡಲಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpBS Yeddyurappaಬಿ.ಎಸ್ ಯಡಿಯೂರಪ್ಪಎಚ್.ಡಿ ದೇವೇಗೌಡBudget Sessionಬಜೆಟ್ ಅಧಿವೇಶನH.D DevegowdaJds MLAಜೆಡಿಎಸ್ ಶಾಸಕ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


