ದೇಶಕ್ಕಾಗಿ ರಾಹುಲ್ ಗಾಂಧಿ ಜೀವ ಬಿಟ್ಟರು; ಕರ್ನಾಟಕ ಕಾಂಗ್ರೆಸ್ ಮುಖಂಡನ ಹೇಳಿಕೆ
ದೇಶಕ್ಕಾಗಿ ರಾಹುಲ್ ಗಾಂಧಿ ತಮ್ಮ ಜೀವವನ್ನೇ ಬಿಟ್ಟರು ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷದ ನಾಯಕರೊಬ್ಬರು ನಗೆಪಾಟಲಿಗೀಡಾಗಿದ್ದಾರೆ.

Published On :
ಹಾಸನ: ದೇಶಕ್ಕಾಗಿ ರಾಹುಲ್ ಗಾಂಧಿ ತಮ್ಮ ಜೀವವನ್ನೇ ಬಿಟ್ಟರು ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷದ ನಾಯಕರೊಬ್ಬರು ನಗೆಪಾಟಲಿಗೀಡಾಗಿದ್ದಾರೆ.
ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದು, ಹಾಸನ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಮಧ್ಯಮಗಳೊಂದಿಗೆ ಮಾತನಾಡುವಾಗ ಯಡವಟ್ಟು ಮಾಡಿಕೊಂಡಿದ್ದು, ಮಾತಿನ ಬರದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನೇ ಸಾಯಿಸಿದ್ದಾರೆ. ಹಾಸನದ ಈದ್ಗಾ ಮೈದಾನ ವಿಚಾರವಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಗೋಪಾಲಸ್ವಾಮಿ, 'ದೇಶಕ್ಕಾಗಿ ಇಂದಿರಾಗಾಂಧಿ ಸತ್ತು ಹೋದರು, ರಾಹುಲ್ ಗಾಂಧಿನೂ ಸತ್ತು ಹೊದರು, ಸೋನಿಯಾ ಗಾಂಧಿ ಪದವಿ ತ್ಯಾಗಮಾಡಿದ್ರು' ಎಂದು ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದಾರೆ.
ಸರ್ಕಾರ ರಸ್ತೆಗಾಗಿ ಈದ್ಗಾ ಭೂಮಿ ಭೂ ಸ್ವಾಧೀನ ಮಾಡಿಕೊಂಡ ಹಿನ್ನೆಲೆ ಬದಲಿ ಭೂಮಿ ನೀಡುವಂತೆ ಹೋರಾಟ ನಡೆಯುತ್ತಿದೆ. ಸಮ್ಮಿಶ್ರ ಸರ್ಕಾರದ ವಿರುದ್ದವೇ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಭಾಗಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


