ಉಮೇಶ್ ಜಾಧವ್ ಗೆ ನೀಡಿದ್ದ ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನ ವಾಪಸ್ ಪಡೆದ ಸರ್ಕಾರ
: ಕಾಂಗ್ರೆಸ್ ಹಾಗೂ ಜೆಡಿಎಸ್ ನ ಅತೃಪ್ತ ಶಾಸಕರನ್ನು ನಿಯಂತ್ರಿಸಲು ತಯಾರಾಗಿರುವ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಕಾಂಗ್ರೆಸ್ ನ ಉಮೇಶ್ ಜಾಧವ್ ಅವರನ್ನು....

Published On :
ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ನ ಅತೃಪ್ತ ಶಾಸಕರನ್ನು ನಿಯಂತ್ರಿಸಲು ತಯಾರಾಗಿರುವ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಕಾಂಗ್ರೆಸ್ ನ ಉಮೇಶ್ ಜಾಧವ್ ಅವರನ್ನು ಉಗ್ರಾಣ ನಿಗಮ ಅಧ್ಯಕ್ಷರಾಗಿ ನೇಮಕಾತಿ ಮಾಡಿದ್ದ ಆದೇಶವನ್ನು ಹಿಂತೆಗೆದುಕೊಂಡಿದೆ.
ಉಮೇಶ್ ಜಾಧವ್ ಕಾಂಗ್ರೆಸ್ ಭಿನ್ನಮತೀಯ ಶಾಸಕರಾಗಿದ್ದು ಅತೃಪ್ತ ಶಾಸಕರ ಬಣದಲ್ಲಿ ಗುರುತಿಸಿಕೊಂಡಿದ್ದರು.ಅಲ್ಲದೆ ಉಮೇಶ್ ಅವರು ಬಿಜೆಪಿ ನಾಯಕರ ನಿರಂತರ ಸಂಪರ್ಕದಲ್ಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಹಿನ್ನಲೆಯಲ್ಲಿ ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನಕ್ಕೆ ಅವರನ್ನು ನೇಮಕಾತಿ ಮಾಡಿದ್ದ ಆದೇಶವನ್ನು ಸರ್ಕಾರ ಹಿಂದಕ್ಕೆ ಪಡೆದಿದೆ. ಉಮೇಶ್ ಜಾಧವ್ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಇನ್ನೂ ಅಧಿಕಾರ ವಹಿಸಿಕೊಂಡಿರಲಿಲ್ಲ.
ಉಮೇಶ್ ಅವರಿಂದ ತೆರವಾದ ಸ್ಥಾನಕ್ಕೆ ರಾಯಚೂರು ಜಿಲ್ಲೆ ಮಸ್ಲಿನ್ ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ್ ಅವರನ್ನು ನೇಮಿಸಲಾಗಿದೆ.

ಇದೇ ವೇಳೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಮೂವರನ್ನು ನಿಗಮ ಮತ್ತು ಮಂಡಳಿಗಳಿಗೆ ಹೊಸದಾಗಿ ನೇಮಕ ಮಾಡಿ ಆದೇಶಿಸಿದ್ದಾರೆ. ಪ್ರತಾಪ್ ಗೌಡ ಪಾಟೀಲ್ ಉಗ್ರಾಣ ನಿಗಮ, ಸವನಗೌಡ ದದ್ದಲ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಸಹಿತ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಶಾಸಕ ಎಂ.ಎ ಗೋಪಾಲಸ್ವಾಮಿ ಅವರಿಗೆ ಸಂಪುಟ ದರ್ಜೆ ಸ್ಥಾನದೊಡನೆ ಲಸಂಪನ್ಮೂಲ ಸಚಿವರ ಸಂಸದೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


