ರಾಜಕೀಯ

ಶಾಸಕ ಗಣೇಶ್ ಬಂಧನಕ್ಕಾಗಿ ವಿಧಾನಸೌಧದಲ್ಲಿ ಕಾದು ಕುಳಿತ ಪೊಲೀಸರು!

: ಕಂಪ್ಲಿ ಶಾಸಕ ಜೆ.ಗಣೇಶ್ ವಿರುದ್ಧ ಕೊಲೆ ಯತ್ನ ಕೇಸು ದಾಖಲಿಸಿಕೊಡಿರುವ ರಾಮನಗರ ಪೋಲೀಸರು, ಅವರನ್ನು ಬಂಧಿಸಲು ವಿಧಾನಸೌಧದಲ್ಲಿ.,.

ಶಾಸಕ ಗಣೇಶ್ ಬಂಧನಕ್ಕಾಗಿ ವಿಧಾನಸೌಧದಲ್ಲಿ ಕಾದು ಕುಳಿತ ಪೊಲೀಸರು!
iಗಣೇಶ್ ಮತ್ತು ಆನಂದ್ ಸಿಂಗ್
Published On :
ಬೆಂಗಳೂರು: ಕಂಪ್ಲಿ ಶಾಸಕ ಜೆ.ಗಣೇಶ್ ವಿರುದ್ಧ ಕೊಲೆ ಯತ್ನ ಕೇಸು ದಾಖಲಿಸಿಕೊಡಿರುವ ರಾಮನಗರ ಪೋಲೀಸರು, ಅವರನ್ನು ಬಂಧಿಸಲು ವಿಧಾನಸೌಧದಲ್ಲಿ ಕಾಯುತ್ತಿದ್ದರು.. ಬಜೆಟ್ ಅಧಿವೇಶನ ಆರಂಭವಾಗಿರುವ ಹಿನ್ನೆಲೆಯಲ್ಲಿ ಗಣೇಶ್ ಅಧಿವೇಶನಕ್ಕೆ ಆಗಮಿಸುತ್ತಾರೆ, ಆ ವೇಳೆ ಬಂಧಿಸಲು ಪೊಲೀಸರು ಸಿದ್ದತೆ ನಡೆಸಿದ್ದರು.
ವಿಧಾನಸಭೆ ಬಜೆಟ್‌ ಅಧಿವೇಶನಕ್ಕೆ ಆಗಮಿಸುವ ಶಾಸಕ ಗಣೇಶ್‌ರನ್ನು ಬಂಧಿಸಲು ಪೊಲೀಸರು ಬುಧವಾರ ಬೆಳಗ್ಗೆ ಸ್ಪೀಕರ್‌ ರಮೇಶ್‌ ಕುಮಾರ್‌ ಅವರ ಅನುಮತಿ ಕೋರಿದ್ದಾರೆ.
ರಾಜ್ಯಪಾಲರು ಬಜೆಟ್ ಅಧಿವೇಶನದ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ  ವಿಧಾನಸೌಧ ಸುತ್ತ ಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿತ್ತು, ಸುಮಾರು 200 ಪೊಲೀಸರನ್ನು ನಿಯೋಜಿಸಲಾಗಿತ್ತು.
ಜನವರಿ 19ರಂದು ಬೆಂಗಳೂರು ಹೊರವಲಯದ ಈಗಲ್ ಟನ್ ರೆಸಾರ್ಟ್ ನಲ್ಲಿ ನಡೆದ ಶಾಸಕರ ಮಾರಾಮಾರಿ ಪ್ರಕರಣದಲ್ಲಿ ಆನಂದ್ ಸಿಂಗ್ ಗೆ ಗಣೇಶ್ ಹಿಗ್ಗಾಮುಗ್ಗಾ ಥಳಿಸಿದ್ದರು, ಹೀಗಾಗಿ ಶಾಸಕ ಗಣೇಶ್ ವಿರುದ್ಧ ರಾಮನಗರ ಪೊಲೀಸರು ಕೊಲೆಯತ್ನ ಸೇರಿದಂತೆ ವಿವಿದ ಸೆಕ್ಷನ್ ಗಳ ಅಡಿ ದೂರು ದಾಖಲಿಸಿಕೊಂಡಿದ್ದರು.
ಬಜೆಟ್ ಅಧಿವೇಶನದ ಮೊದಲ ದಿನದಂದು ಶಾಸಕ ಗಣೇಶ್ ಸದನಕ್ಕೆ ಹಾಜರಾಗುವ ಸಾಧ್ಯತೆಯಿದೆ ಎಂದು ನಂಬಿದ್ದ ಪೊಲೀಸರು ಮುಫ್ತಿಯಲ್ಲಿ ಗಣೇಶ್ ಗಾಗಿ ಕಾಯುತ್ತಿದ್ದರು, ಪ್ರಕರಣ ದಾಖಲಾದ ದಿನದಿಂದ ಗಣೇಶ್ ನಾಪತ್ತೆಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.