ಸಿಎಂ ಆರೋಪ ಸತ್ಯವಾಗಿದ್ರೆ ರಾಜಕೀಯದಿಂದ ನಿವೃತ್ತಿ; ಅವರು ನೀಡಿರುವುದು ಫೇಕ್ ಆಡಿಯೋ: ಯಡಿಯೂರಪ್ಪ ಪ್ರತಿಕ್ರಿಯೆ
ಸಿಎಂ ಕುಮಾರಸ್ವಾಮಿ ಒಳ್ಳೆಯ ಪ್ರೊಡ್ಯೂಸರ್, ಅವರು ಬಿಡುಗಡೆ ಮಾಡಿರುವ ಆಡಿಯೋ ಫೇಕ್ ಆಗಿದೆ, ನನ್ನ ವಿರುದ್ಧ ಮಾಡಿರುವುದು ಆರೋಪ ಸತ್ಯವಾದ್ರೆ ...

Published On :
ಬೆಂಗಳೂರು: ಸಿಎಂ ಕುಮಾರಸ್ವಾಮಿ ಒಳ್ಳೆಯ ಪ್ರೊಡ್ಯೂಸರ್, ಅವರು ಬಿಡುಗಡೆ ಮಾಡಿರುವ ಆಡಿಯೋ ಫೇಕ್ ಆಗಿದೆ, ನನ್ನ ವಿರುದ್ಧ ಮಾಡಿರುವುದು ಆರೋಪ ಸತ್ಯವಾದ್ರೆ ನಾನು ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಮಾಜಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.
ವಿಧಾನ ಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಆಪರೇಷನ್ ಕಮಲದ ಬಾಂಬ್ ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಿಎಂ ಹೇಳಿಕೆ ಸತ್ಯಕ್ಕೆ ದೂರವಾದದ್ದು , ನಾನು ಯಾರನ್ನೂ ಭೇಟಿ ಮಾಡಿಲ್ಲ, ದೇವದುರ್ಗಕ್ಕೆ ಯಾವುದೋ ದೇವಸ್ಥಾನದ ಕೆಲಸಕ್ಕೆ ಹೋಗಿದ್ದೆ ಎಂದು ಹೇಳಿದ್ದಾರೆ.
ನಾನು ಸ್ಪೀಕರ್ ಅವರನ್ನೆ ಬುಕ್ ಮಾಡಿದ್ದೇನೆ ಎಂದು ಆರೋಪಿಸಲಾಗಿದೆ, ಆದರೆ ಅದು ನಿಜವೇ ಆದರೆ ನಾನು ರಾಜಕೀಯ. ನಿವೃತ್ತಿ ಹೊಂದುವುದಾಗಿ ಹೇಳಿದ್ದಾರೆ. ಇನ್ನೂ ಇಂದಿನ ಬಜೆಟ್ ಅಧಿವೇಶನಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ನ 10-11 ಶಾಸಕರು ಹಾಜರಾಗುವುದಿಲ್ಲ, ಇನ್ನು ಕೆಲವೇ ದಿನಗಳು ಕಾದು ನೋಡಿ ಎಂದು ಹೇಳಿದ್ದಾರೆ.
ಬಜೆಟ್ ಮಂಡನೆಗೆ ನಾವು ಯಾವುದೇ ಅಡ್ಡಿ ಮಾಡುವುದಿಲ್ಲ, ಬಜೆಟ್ ಚರ್ಚೆಯಲ್ಲಿ ಪಾಲ್ಗೋಳ್ಳುತ್ತೇವೆ ಎಂದು ಹೇಳಿದ್ದಾರೆ. ನಮ್ಮ ಕಡೆಯಿಂದ ಯಾವುದೇ ಅಡ್ಡಿಯಾಗುವುದಿಲ್ಲ, 15 ಕಾಂಗ್ರೆಸ್ ಶಾಸಕರು ಗೈರಾದ ಸಂದರ್ಭದಲ್ಲಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


