ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರಾದ ರೆಬೆಲ್ ಶಾಸಕರ ವಿರುದ್ಧ 'ಪಕ್ಷಾಂತರ ಕಾಯ್ದೆಯಡಿ ದೂರು ದಾಖಲು
ನಿರೀಕ್ಷೆಯಂತೆಯೇ ಇಂದಿನ ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರಾದ ರೆಬೆಲ್ ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಪಕ್ಷ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಅಧಿಕೃತವಾಗಿ ದೂರು ನೀಡಿದೆ ಎಂದು ತಿಳಿದುಬಂದಿದೆ.

Published On :
ಬೆಂಗಳೂರು: ನಿರೀಕ್ಷೆಯಂತೆಯೇ ಇಂದಿನ ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರಾದ ರೆಬೆಲ್ ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಪಕ್ಷ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಅಧಿಕೃತವಾಗಿ ದೂರು ನೀಡಿದೆ ಎಂದು ತಿಳಿದುಬಂದಿದೆ.
ಈ ಹಿಂದೆಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಶಾಸಕರಿಗೆ ವಿಪ್ ಜಾರಿಗೊಳಿಸಲಾಗಿತ್ತು. ಈ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ಹಾಗೂ ರಾಯಚೂರು ಶಾಸಕ ಬಸನಗೌಡ ಪಾಟೀಲ್ ಮುಂಬೈನಿಂದ ಬೆಂಗಳೂರಿಗೆ ಬಂದಿದ್ದಾರೆ. ಅಂತೆಯೇ ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣ ಬಳಿಕ ಕಾಂಗ್ರೆಸ್ ನಿಂದ ಅಮಾನತುಗೊಂಡಿರುವ ಶಾಸಕ ಇನ್ನೂ ನಾಪತ್ತೆಯಾಗಿದ್ದು ಅವರನ್ನು ಹೊರತು ಪಡಿಸಿ ಬಿಸಿ ಪಾಟೀಲ್ ಮಧ್ಯಾಹ್ನ ಬರುವುದಾಗಿ ಹೇಳಿದ್ದಾರೆ.
ಹೀಗಾಗಿ ಇಂದು ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರಾಗಿರುವ ನಾಲ್ಕು ಮಂದಿ ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮಜರಿಗಿಸುವಂತೆ ಸ್ಪೀಕರ್‌ಗೆ ದೂರು ನೀಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಮಾಜಿ ಸಚಿವ ರಮೇಶ ಜಾರಕಿಹೊಳಿ, ಮಹೇಶ ಕುಮಠಳ್ಳಿ, ಉಮೇಶ ಜಾಧವ್, ಬಿ.ನಾಗೇಂದ್ರ ವಿರುದ್ಧ ದೂರು ದಾಖಲಾಗುವ ಸಾಧ್ಯತೆ ಇದೆ.
ಈ ಬಗ್ಗೆ ಮಾಹಿತಿ ನೀಡಿದ ಸಿದ್ದರಾಮಯ್ಯ ಅವರು, 'ಮಾಜಿ ಸಚಿವ ರಮೇಶ ಜಾರಕಿಹೊಳಿ, ಮಹೇಶ ಕುಮಠಳ್ಳಿ, ಉಮೇಶ ಜಾಧವ್, ಬಿ.ನಾಗೇಂದ್ರ ಸಭೆಗೆ ಬಂದಿಲ್ಲ. ಕಂಪ್ಲಿ ಶಾಸಕ ಜೆ.ಎನ್. ಗಣೇಶ ಅವರೂ ಕೂಡ ಸಭೆಗೆ ಬಂದಿಲ್ಲ. ಆದರೆ ಅವರ ಜತೆ ಗಣೇಶ್ ಇಲ್ಲ. ನಾಲ್ವರು ಅತೃಪ್ತರು ಹಾಜರಾಗಲು ಸಾಧ್ಯವಾಗದಿರಲು ಕಾರಣ ನೀಡಿ ಪತ್ರ ಬರೆದಿದ್ದಾರೆ. ಫೆ.15ರವರೆಗೆ ಬರಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಅವರಿಗೆ ಈಗಾಗಲೇ ಸಾಕಷ್ಟು ಅವಕಾಶ ನೀಡಲಾಗಿದೆ. ಎಲ್ಲ ಶಾಸಕರಿಗೂ ಸದನದಲ್ಲಿ ಪಾಲ್ಗೊಳ್ಳುವಂತೆ ವ್ಹಿಪ್ ಜಾರಿ ಮಾಡಲಾಗಿತ್ತು. ಅಧಿವೇಶನ ಮುಗಿಯುವರೆಗೂ ಬರುವುದಿಲ್ಲ ಎಂದು ನಾಲ್ವರು ಪತ್ರದಲ್ಲಿ ತಿಳಿಸಿದ್ದಾರೆ. ನಾಲ್ವರು ಅತೃಪ್ತರ ವಿರುದ್ದ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಕ್ರಮ ಜರುಗಿಸುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡುತ್ತೇವೆ. ಇದು ಶಾಸಕಾಂಗ ಪಕ್ಷದ ಸಭೆಯಲ್ಲಿ ಅವಿರೋಧವಾಗಿ ಕೈಗೊಂಡ ನಿರ್ಣಯ. ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ನಾಲ್ವರು ಶಾಸಕರನ್ನು ಅನರ್ಹಗೊಳಿಸುವಂತೆ ಸಂಜೆಯೊಳಗೆ ಸಭಾಧ್ಯಕ್ಷರಿಗೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.
'ಜೆ.ಎನ್.ಗಣೇಶ ಪಾಪ ಸಿಕ್ಕಾಕಿಕೊಂಡು ಬರಲಿಕ್ಕೆ ಆಗ್ತಿಲ್ಲಾ. ಯಾರ ವಿರುದ್ಧ ಕ್ರಮ ಕೈಗೊಳ್ಳುವ ಮೊದಲು ಸಹಜ ನ್ಯಾಯ ನೋಡಬೇಕು. ಆ ಪ್ರಕಾರ ಅವಕಾಶ ಕೊಡಬೇಕು. ಹೀಗಾಗಿ ಅವರಿಗೆ ಅವಕಾಶ ನೀಡಲಾಗಿದೆ' ಎಂದು ಹೇಳಿದರು. ಶಾಸಕರಿಗೆ ಆಮಿಷ ಒಡ್ಡಿದೆ ಎನ್ನಲಾದ ಆಡಿಯೊ ಫೇಕ್ ಎನ್ನುವುದು ಯಡಿಯೂರಪ್ಪ ಹೇಳಿದ್ದೊ ಅಥವಾ ಮಿಮಿಕ್ರಿಯೊ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಹಿಂದೆ ಕೂಡ ಅನಂತಕುಮಾರ್ ಆಡಿಯೊ ಬಯಲಾಗಿತ್ತು. ತನಿಖೆಯಿಂದ ಸಾಬೀತಾಗಿತ್ತು. ನಾವೇ ಕ್ರಮ ಕೈಗೊಂಡಿರಲಿಲ್ಲ. ಯಡಿಯೂರಪ್ಪ ಬಣ್ಣ ಸಂಪೂರ್ಣ ಬಯಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುCongressಕಾಂಗ್ರೆಸ್BengaluruJDSbjpಬಿಜೆಪಿಜೆಡಿಎಸ್HD Kumaraswamyಸಿಎಂ ಕುಮಾರ ಸ್ವಾಮಿKarnataka Budget 2019ಕರ್ನಾಟಕ ಬಜೆಟ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


