ಪ್ರೀತಂಗೌಡ ಮನೆ ಮೇಲೆ ದಾಳಿ: ಬಿಜೆಪಿ ಶಾಸಕರೊಂದಿಗೆ ಹಾಸನಕ್ಕೆ ತೆರಳಿದ ಬಿಎಸ್ವೈ
ಆಪರೇಷನ್ ಕಮಲ ಕುರಿತ ಆಡಿಯೋದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ಸಾವಿನ ಬಗ್ಗೆ ಮಾತನಾಡಿದ ಆರೋಪ..

Published On :
ಬೆಂಗಳೂರು: ಆಪರೇಷನ್ ಕಮಲ ಕುರಿತ ಆಡಿಯೋದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ಸಾವಿನ ಬಗ್ಗೆ ಮಾತನಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ದಾಳಿ ನಡೆಸಿದ್ದು, ಈ ವಿಚಾರ ಬುಧವಾರ ಬಜೆಟ್ ಅಧಿವೇಶನದ ಕಲಾಪವನ್ನು ಆಹುತಿ ಪಡೆಯಿತು.
ಇಂದು ಮಧ್ಯಾಹ್ನ ಕಲಾಪ ಆರಂಭವಾಗುತ್ತಿದ್ದಂತೆ ಸದನದ ಬಾವಿಗಿಳಿದ ಬಿಜೆಪಿ ಶಾಸಕರು, ಜೆಡಿಎಸ್ ಗೂಂಡಾಗಿರಿ ನಡೆಸುತ್ತಿದೆ. ನಮ್ಮ ಪಕ್ಷದ ಶಾಸಕರ ಮನೆ ಮೇಲೆ ಗುಂಡಗಳನ್ನು ಬಿಟ್ಟು ದಾಳಿ ನಡೆಸಿದೆ ಎಂದು ಆರೋಪಿಸಿ, ಪ್ರತಿಭಟನೆ ನಡೆಸಿದರು. ಪ್ರತಿಪಕ್ಷಗಳ ಕೋಲಾಹಲದಿಂದಾಗಿ ಸ್ಪೀಕರ್ ರಮೇಶ್ ಕುಮಾರ್ ಅವರು ಕಲಾಪವನ್ನು ನಾಳೆಗೆ ಮುಂದೂಡಿದರು.
ಕಲಾಪದ ಬಳಿಕ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರು ಡಜನ್ ಗೂ ಹೆಚ್ಚು ಶಾಸಕರೊಂದಿಗೆ ಹಾಸನಕ್ಕೆ ತೆರಳಿದ್ದು, ನಾಳೆ ಹಾಸನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.
ಹಾಸನಕ್ಕೆ ತೆರಳುವ ಮುನ್ನ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಇಂತಹ ಗೂಂಡಾಗಿರಿ ಜೆಡಿಎಸ್ಗೆ ಶೋಭೆ ತರುವಂತಹದ್ದಲ್ಲ. ಈ ಘಟನೆಯನ್ನು ನಾವು ಖಂಡಿಸುತ್ತೇವೆ. ನಾವು ಇಂದು ಎಲ್ಲ ಸದಸ್ಯರು ಈಗಲೇ ಹಾಸನಕ್ಕೆ ತೆರಳುತ್ತಿದ್ದೇವೆ. ಪ್ರೀತಂಗೌಡ ಕುಟುಂಬ ಸದಸ್ಯರು, ಘಟನೆಯಲ್ಲಿ ಗಾಯಗೊಂಡ ಕಾರ್ಯಕರ್ತನನ್ನು ಮಾತನಾಡಿಸುತ್ತೇವೆ. ನಂತರ ಬೃಹತ್ ಪ್ರತಿಭಟನೆಯನ್ನು ಮಾಡಲಿದ್ದೇವೆ. ಈ ವಿಚಾರವನ್ನು ನಾವು ಇಲ್ಲಿಗೆ ಬಿಡುವುದಿಲ್ಲ. ಇದರ ಪ್ರತಿಫಲವನ್ನು ಜೆಡಿಎಸ್ ಅನುಭವಿಸಲೇಬೇಕು ಎಂದು ಎಚ್ಚರಿಕೆ ನೀಡಿದರು.
ಪ್ರೀತಮ್ ಗೌಡ ಮನೆ ಮೇಲೆ ದಾಳಿ ಹಿನ್ನೆಲೆಯಲ್ಲಿ ಬಿಎಸ್ವೈ, ಆರ್ ಅಶೋಕ್, ಗೋವಿಂದ ಕಾರಜೋಳ ಸೇರಿ 12ಕ್ಕೂ ಹೆಚ್ಚು ಬಿಜೆಪಿ ನಾಯಕರು ಹಾಸನ ಕಡೆಗೆ ಹೊರಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


