ರಾಜಕೀಯ

ಮತ್ತೆ ಕಾಂಗ್ರೆಸ್ ಗೆ ಬೆಂಬಲ ನೀಡಿದ ಪಕ್ಷೇತರ ಶಾಸಕ ಹೆಚ್ ನಾಗೇಶ್!

ರಾಜ್ಯ ಸಮ್ಮಿಶ್ರ ಸರ್ಕಾರದ ಕಾರ್ಯನಿರ್ವಹಣೆಗೆ ಬೇಸರ ವ್ಯಕ್ತಪಡಿಸಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಕಳೆದ ತಿಂಗಳಷ್ಟೇ ವಾಪಸ್ ಪಡೆದಿದ್ದ ಪಕ್ಷೇತರ ಶಾಸಕ ಹೆಚ್ ನಾಗೇಶ್, ಈಗ ಕಾಂಗ್ರೆಸ್

ಮತ್ತೆ ಕಾಂಗ್ರೆಸ್ ಗೆ ಬೆಂಬಲ ನೀಡಿದ ಪಕ್ಷೇತರ ಶಾಸಕ ಹೆಚ್ ನಾಗೇಶ್!
ಹೆಚ್ ನಾಗೇಶ್
Published On :
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಕಾರ್ಯನಿರ್ವಹಣೆಗೆ ಬೇಸರ ವ್ಯಕ್ತಪಡಿಸಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಕಳೆದ ತಿಂಗಳಷ್ಟೇ ವಾಪಸ್ ಪಡೆದಿದ್ದ ಪಕ್ಷೇತರ ಶಾಸಕ ಹೆಚ್ ನಾಗೇಶ್, ಈಗ ಕಾಂಗ್ರೆಸ್ ಗೆ ತಮ್ಮ ಬೆಂಬಲ ಘೋಷಿಸಿದ್ದಾರೆ. 
ಹಳೇ ಗಂಡನ ಪಾದವೇ ಗತಿ ಎಂಬಂತೆ ಮುಳಬಾಗಿಲು ಪಕ್ಷೇತರ ಶಾಸಕ ಹೆಚ್ ನಾಗೇಶ್  ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬೆಂಬಲ ಘೋಷಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂದೇ ಹೇಳಲಾಗುವ ಡಿ.ಕೆ ಶಿವಕುಮಾರ್ ಅವರು ಇದ್ದರು. 
"ಉತ್ತಮ ಆಡಳಿತಕ್ಕಾಗಿ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದೆ ಆದರೆ ಈ ಸರ್ಕಾರ ಉತ್ತಮ ಆಡಳಿತ ನೀಡುತ್ತಿಲ್ಲ. ಜನರ ಆಶಯ ಈಡೇರಿಸುವಲ್ಲಿ ಸರ್ಕಾರ ವಿಫಲಗೊಂಡಿದೆ. ಸರ್ಕಾರದಿಂದ ನಮಗೆ ಸೂಕ್ತ ಸ್ಪಂದನೆ ಸಿಗುತ್ತಿಲ್ಲ.  ಹೀಗಾಗಿ ನಾನು ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದು ಬಿಜೆಪಿಗೆ ಬೆಂಬಲ ನೀಡುತ್ತೇನೆ" ಎಂದು ಜ.15 ರಂದು ಶಾಸಕ ನಾಗೇಶ್ ಬೆಂಬಲ ವಾಪಸ್ ಪತ್ರವನ್ನು ಪ್ರಕಟಿಸಿದ್ದರು. ಆದರೆ ಇದಾಗಿ ಒಂದು ತಿಂಗಳಾಗುವುದಕ್ಕೂ ಮುನ್ನವೇ ನಾಗೇಶ್ ಮತ್ತೆ ಕಾಂಗ್ರೆಸ್-ಜೆಡಿಎಸ್ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.