ರಾಜಕೀಯ

ಕಲ್ಲು ತೂರಾಟ ಪ್ರಕರಣ: ಬಿಜೆಪಿ ಶಾಸಕ ಪ್ರೀತಂ ಗೌಡ ಕುಟುಂಬಕ್ಕೆ ರಕ್ಷಣೆ ನೀಡಲು ಸ್ಪೀಕರ್ ಆದೇಶ

: ಜೆಡಿಎಸ್ ಕಾರ್ಯಕರ್ತರ ದಾಳಿ ಹಿನ್ನೆಲೆಯಲ್ಲಿ ಹಾಸನದ ಬಿಜೆಪಿ ಶಾಸಕ ಪ್ರೀತಂ ಗೌಡ ಅವರಿಗೆ ಪೂರ್ಣ ರಕ್ಷಣೆ ನೀಡಬೇಕೆಂದು ವಿಧಾನಸಭೆ ಅಧ್ಯಕ್ಷ ಕೆ.ಆರ್. ರಮೇಶ್ ಕುಮಾರ್ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.

ಕಲ್ಲು ತೂರಾಟ ಪ್ರಕರಣ: ಬಿಜೆಪಿ ಶಾಸಕ ಪ್ರೀತಂ ಗೌಡ ಕುಟುಂಬಕ್ಕೆ ರಕ್ಷಣೆ ನೀಡಲು ಸ್ಪೀಕರ್ ಆದೇಶ
ಬಿಜೆಪಿ ಶಾಸಕ ಪ್ರೀತಂ ಗೌಡ ಕುಟುಂಬಕ್ಕೆ ರಕ್ಷಣೆ ನೀಡಲು ಸ್ಪೀಕರ್ ಆದೇಶ
Published On :
ಬೆಂಗಳೂರು: ಜೆಡಿಎಸ್ ಕಾರ್ಯಕರ್ತರ ದಾಳಿ ಹಿನ್ನೆಲೆಯಲ್ಲಿ ಹಾಸನದ ಬಿಜೆಪಿ ಶಾಸಕ ಪ್ರೀತಂ ಗೌಡ ಅವರಿಗೆ ಪೂರ್ಣ ರಕ್ಷಣೆ ನೀಡಬೇಕೆಂದು ವಿಧಾನಸಭೆ ಅಧ್ಯಕ್ಷ ಕೆ.ಆರ್. ರಮೇಶ್ ಕುಮಾರ್ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. 
ಈ ವಿಚಾರ ಕುರಿತು ಬಿಜೆಪಿ ಸದಸ್ಯರು ಧರಣಿ ನಡೆಸಿ ಸರ್ಕಾರದ ಗಮನವನ್ನು ಸೆಳೆದಾಗ ಶಾಸಕರಿಗೆ ಮತ್ತು ಅವರ ಕುಟುಂಬಕ್ಕೆ ಪೂರ್ಣ ಪ್ರಮಾಣದ ರಕ್ಷಣೆ ಒದಗಿಸಬೇಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರ್ ಸ್ವಾಮಿ ಅವರಿಗೆ ಸೂಚನೆ ನೀಡಿದ್ದಾರೆ. 
ಇಂದು ವಿಧಾನ ಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿಯ ಶಾಸಕರು ಸದನದ ಬಾವಿಗೆ ಧಾವಿಸಿ ಸರ್ಕಾರ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾಜಕೀಯ ವಿರೋಧಿಗಳನ್ನು ಮುಗಿಸಲು ಸರ್ಕಾರ ಸಂಚು ಮಾಡಿದೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರ ಪರೋಕ್ಷ ಕುಮ್ಮಕ್ಕಿನ ಮೇರೆಗೆ ಹಾಸನದಲ್ಲಿ ನಿನ್ನೆ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇದರಿಂದ ಶಾಸಕರ ತಲೆಗೆ ಪೆಟ್ಟಾಗಿದೆ. ಕೆಲವು ಬಿಜೆಪಿ ಕಾರ್ಯಕರ್ತರಿಗೂ ಗಾಯಗಳಾಗಿವೆ. ಗಂಭೀರ ಗಾಯಗಳಾಗಿರುವ ಕೆಲವು ಕಾರ್ಯಕರ್ತರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ ಎಂದರು.
ಜೆಡಿಎಸ್ ಕಾರ್ಯಕರ್ತರು ಶಾಸಕರು ಮನೆಯ ಮೇಲೆ ದಾಳಿ ನಡೆಸುವ ಮೂಲಕ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ. ಜಿಲ್ಲಾ ಕೇಂದ್ರದಲ್ಲಿ ಶಾಕರಿಗೆ ರಕ್ಷಣೆ ಇಲ್ಲದೆ ಬದುಕುವಂತಹ ದಯನೀಯ ಪರಿಸ್ಥಿತಿ ಬಂದಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 
ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಕೆಲ ಗೂಂಡಾಗಳು ನಡೆಸುತ್ತಿರುವ ದೌರ್ಜನ್ಯ, ದಬ್ಬಾಳಿಕೆಗೆ ರಾಜ್ಯ ಸರ್ಕಾರ ಒತ್ತಾಸೆ ನೀಡುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಆರೋಪಿಸಿದರು.
ಈ ಹಂತದಲ್ಲಿ ಇದೊಂದು ಗಂಭೀರವಾದ ವಿಚಾರ. ಶಾಸಕರಿಗೆ ಪೂರ್ಣ ಪ್ರಮಾಣದ ರಕ್ಷಣೆ ನೀಡುವುದು ಸರ್ಕಾರದ ಹೊಣೆ. ಕೂಡಲೇ ಶಾಸಕರಿಗೆ, ಅವರ ಕುಟುಂಬಕ್ಕೆ ಅಗತ್ಯ ರಕ್ಷಣೆ ಒದಗಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಸರ್ಕಾರಕ್ಕೆ ಸೂಚನೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.