ಲೋಕಸಭೆ ಸೀಟು ಹಂಚಿಕೆ: ರಾಹುಲ್ ಗಾಂಧಿ ಜೊತೆ ಮಾತ್ರ ಮಾತುಕತೆ ಎನ್ನುತ್ತಿರುವ ದೇವೇಗೌಡರು
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಹ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂದು ...

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂದು ತಿಂಗಳ ಹಿಂದೆಯೇ ಘೋಷಣೆಯಾಗಿತ್ತು. ಆದರೆ 28 ಲೋಕಸಭಾ ಕ್ಷೇತ್ರಗಳಿಗೆ ಸೀಟು ಹಂಚಿಕೆ ಕುರಿತು ಇನ್ನೂ ಕಾಂಗ್ರೆಸ್-ಜೆಡಿಎಸ್ ಮಾತುಕತೆ ಆರಂಭಿಸಿಲ್ಲ.
ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಜೊತೆ ಮಾತುಕತೆ ನಡೆಸಲು ಕಾಂಗ್ರೆಸ್ ಉತ್ಸುಕವಾಗಿದ್ದರೆ, ದೇವೇಗೌಡರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜೊತೆಗೆ ಮಾತ್ರ ಚರ್ಚಿಸಲು ಒಲವು ಹೊಂದಿದ್ದಾರೆ ಎಂದು ತಿಳಿದುಬಂದಿದೆ.
ದೇವೇಗೌಡರು ರಾಜ್ಯದ ಕಾಂಗ್ರೆಸ್ ನಾಯಕರ ಜೊತೆ ಸೀಟು ಹಂಚಿಕೆ ಸಂಬಂಧ ಮಾತುಕತೆ ನಡೆಸುವ ಅಗತ್ಯವಿಲ್ಲ. ಯಾಕೆಂದರೆ ಅವರು ಜೆಡಿಎಸ್ ನ ರಾಷ್ಟ್ರ ನಾಯಕರು. ಎರಡೂ ಪಕ್ಷಗಳ ಹೈಕಮಾಂಡ್ ಗೆ ಬಿಟ್ಟ ವಿಚಾರವಿದು. ಹೀಗಾಗಿ ನೇರವಾಗಿ ರಾಹುಲ್ ಗಾಂಧಿ ಮತ್ತು ದೇವೇಗೌಡರ ಮಧ್ಯೆ ಮಾತುಕತೆ ನಡೆದರೆ ಒಳ್ಳೆಯದು ಎಂಬ ಅನಿಸಿಕೆ ಜೆಡಿಎಸ್ ನಾಯಕರದ್ದು ಕೂಡ. ಇದೇ ಮಾತನ್ನು ಜೆಡಿಎಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಆಲಿ ಕೂಡ ಹೇಳಿದ್ದಾರೆ.
ಕಾಂಗ್ರೆಸ್ ಜೆಡಿಎಸ್ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯನವರು ಸೀಟು ಹಂಚಿಕೆ ಮಾತುಕತೆ ವೇಳೆ ದೇವೇಗೌಡರು ಇರಬೇಕೆಂದು ಬಯಸುತ್ತಿದ್ದಾರೆ. ಆದರೆ ಸಿದ್ದರಾಮಯ್ಯನವರ ಜೊತೆ ಮಾತುಕತೆ ನಡೆಸಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ವಿಶ್ವನಾಥ್ ಅವರನ್ನು ಕಳುಹಿಸುವ ಮನಸ್ಸು ದೇವೇಗೌಡರಿಗೆ ಇದ್ದಂತಿದೆ. ರಾಹುಲ್ ಗಾಂಧಿ ಜೊತೆ ಮಾತನಾಡಿ ತಮಗೆ ಬೇಕಾದ ಕ್ಷೇತ್ರವನ್ನು ಪಡೆದುಕೊಳ್ಳಬಹುದು ಎಂಬ ಲೆಕ್ಕಾಚಾರ ದೇವೇಗೌಡರದ್ದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


