ಗೆಲ್ಲುವ ಎಲ್ಲಾ ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧೆ: ಸಿದ್ದರಾಮಯ್ಯ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಎಲ್ಲಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ....

Published On :
ಹುಬ್ಬಳ್ಳಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಎಲ್ಲಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು ಲೋಕಸಭೆ ಚುನಾವಣೆಗೆ ಸ್ಥಾನ ಹಂಚಿಕೆ ಕುರಿತು ಜೆಡಿಎಸ್ ಹಾಗೂ ಕಾಂಗ್ರೆಸ್ ಮಧ್ಯೆ ಕುರಿತು ಇದುವರೆಗೆ ಯಾವುದೇ ಚರ್ಚೆ ನಡೆದಿಲ್ಲ. ಆದರೆ ಗೆಲ್ಲುವ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ. ಎರಡು ಪಕ್ಷಗಳು ಪರಸ್ಪರ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಲೋಕಸಭೆ ಚುನಾವಣೆ ಎದುರಿಸಲಿವೆ ಎಂದು ಹೇಳಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸಲಾಗುತ್ತಿದ್ದು, ಈಗಾಗಲೇ ಚುನಾವಣೆ ಸಮಿತಿ ಸಭೆ ಮಾಡಲಾಗಿದೆ. ಶೀಘ್ರವೇ ಇನ್ನೊಂದು ಸಭೆ ನಡೆಸಲಾಗುವುದು. ಮಂಡ್ಯದಿಂದ ಕಾರ್ಯಕರ್ತರ ಒತ್ತಾಯದ ಮೇರೆಗೆ ಚುನಾವಣೆ ಸ್ಪರ್ಧಿಸಲು ಸುಮಲತಾ ಇಂಗೀತ ವ್ಯಕ್ತಪಡಿಸಿದ್ದಾರೆ. ಆದರೆ, ಸೀಟು ಹಂಚಿಕೆ ಕುರಿತು ಪಕ್ಷ ಇದುವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.
ಪ್ರಿಯಂಕಾ ಗಾಂಧಿ ಅವರ ರಾಜ್ಯ ಚುನಾವಣಾ ಪ್ರಚಾರ ಕುರಿತು ಮಾತನಾಡಿದ ಸಿದ್ದರಾಮಯ್ಯ, ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶ ರಾಜಕೀಯ ಮೇಲೆ ಗಮನ ಕೇಂದ್ರಿಕರಿಸಿದ್ದಾರೆ. ಒಂದು ವೇಳೆ ಅವರಿಗೆ ಸಮಯ ಸಿಕ್ಕರೆ ರಾಜ್ಯದಲ್ಲಿಯೂ ಪ್ರಚಾರ ಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Siddaramaiahಸಿದ್ದರಾಮಯ್ಯಲೋಕಸಭೆ ಚುನಾವಣೆLoksabhe Pollswinning constituenciesಗೆಲ್ಲುವ ಕ್ಷೇತ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


