ಅವಕಾಶ ಸಿಕ್ಕರೆ ಅಂಬರೀಷ್ ಗೆ ಜನ ತೋರಿಸಿದ ಪ್ರೀತಿಗೆ ಋಣ ತೀರಿಸುವೆ: ಸುಮಲತಾ
ಅಂಬರೀಶ್ ಅವರನ್ನು ನೀವು ನೋಡಿಕೊಂಡಿದ್ದೀರಿ, ಸಾಕಿದ್ದೀರಿ, ಬೆಳೆಸಿದ್ದೀರಿ. ಆ ಒಂದು ಪ್ರೀತಿಯ ಋಣ ನಮ್ಮಲ್ಲಂತೂ ಇದ್ದೇ ಇದೆ. ಆ ಋಣ ತೀರಿಸಲು ಅವಕಾಶ ಸಿಕ್ಕರೆ ...

Published On :
ಮಂಡ್ಯ: ನಮ್ಮ ಯಜಮಾನರ ಊರು ಎಂದರೇ ಇದು ನಮ್ಮ ಊರು, ಅಂಬರೀಷ್ ಅವರಿಗೆ ಇಲ್ಲಿನ ಜನ ತೋರಿಸಿದ ಪ್ರೀತಿಗೆ ಋಣ ತೀರಿಸಲು ಅವಕಾಶ ಸಿಕ್ಕರೆ ಖಂಡಿತಾ ತೀರಿಸುವೆ ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಚಿಕ್ಕರಸಿನಕೆರೆ ಗ್ರಾಮದ ಕಾಲಭೈರವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಬಳಿಕ ಬಸವನ ಆಶೀರ್ವಾದ ಪಡೆದು, ಕಾಣಿಕೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಅವರನ್ನು ನೀವು ನೋಡಿಕೊಂಡಿದ್ದೀರಿ, ಸಾಕಿದ್ದೀರಿ, ಬೆಳೆಸಿದ್ದೀರಿ. ಆ ಒಂದು ಪ್ರೀತಿಯ ಋಣ ನಮ್ಮಲ್ಲಂತೂ ಇದ್ದೇ ಇದೆ. ಆ ಋಣ ತೀರಿಸಲು ಅವಕಾಶ ಸಿಕ್ಕರೆ ಖಂಡಿತಾ ನಾನು ಅದನ್ನು ನೆರವೇರಿಸುತ್ತೇನೆ ಎಂದು ಹೇಳಿದ್ದಾರೆ.
ತಮ್ಮ ರಾಜಕೀಯ ಜೀವನದ ಕುರಿತು ಮಂಡ್ಯ ಜನರೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ, ಅಭಿಮಾನಿಗಳ ಪ್ರೀತಿ ವಿಶ್ವಾಸದ ಮಾತುಗಳೇ ನನ್ನನ್ನು ಇಷ್ಟು ದೂರ ಕರೆದುಕೊಂಡು ಬಂದಿದೆ ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ನಿನ್ನೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರ ಗಮನಕ್ಕೆ ತಂದಿದ್ದೇನೆ. ಮಂಡ್ಯದ ಜನತೆ ಹಾಗೂ ಅಂಬರೀಶ್ ಅವರ ಅಭಿಮಾನಿಗಳ ಆಸೆ, ಅಪೇಕ್ಷೆಯನ್ನು ಸಿದ್ದರಾಮಯ್ಯ ಅವರ ಮುಂದಿಟ್ಟಿದ್ದೇನೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


