ರಾಜಕೀಯ

ಎಸ್ಐಟಿ ತನಿಖೆಗೆ ಆತುರಬೇಡ , ಸೀಟು ಹಂಚಿಕೆಯಲ್ಲಿ ಗೊಂದಲವಿಲ್ಲ: ಸಿಎಂ ಕುಮಾರಸ್ವಾಮಿ

ಆಪರೇಷನ್ ಕಮಲ ಧ್ವನಿ ಸುರುಳಿ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಲು ತಮಗೆ ಆತುರವಿಲ್ಲ. ಯಾರನ್ನೋ ಹೆದರಿಸಲು ತನಿಖೆ ನಡೆಸುವ ಅಗತ್ಯವಿಲ್ಲ...

ಎಸ್ಐಟಿ ತನಿಖೆಗೆ ಆತುರಬೇಡ , ಸೀಟು ಹಂಚಿಕೆಯಲ್ಲಿ ಗೊಂದಲವಿಲ್ಲ: ಸಿಎಂ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Published On :
ಬೆಂಗಳೂರು: ಆಪರೇಷನ್ ಕಮಲ ಧ್ವನಿ ಸುರುಳಿ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಲು ತಮಗೆ ಆತುರವಿಲ್ಲ. ಯಾರನ್ನೋ ಹೆದರಿಸಲು ತನಿಖೆ ನಡೆಸುವ ಅಗತ್ಯವಿಲ್ಲ. ನ್ಯಾಯಯುತ ತನಿಖೆ ನಡೆಸುವುದು ತಮ್ಮ ಉದ್ದೇಶ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಹೇಳಿದ್ದಾರೆ.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಎಸ್ಐಟಿ ತನಿಖೆಗೆ ಆತುರಬೇಡ. ಸ್ಪೀಕರ್ ರಮೇಶ್ ಕುಮಾರ್ ಅವರು ಈಗಾಗಲೇ ಆರೋಪ ಮುಕ್ತರಾಗಿದ್ದಾರೆ. ನ್ಯಾಯಯುತ ತನಿಖೆಗೆ ಒಂದಷ್ಟು ಕಾಲಾವಕಾಶಬೇಕು. ವ್ಯವಸ್ಥೆ ಸರಿಮಾಡಲು ಒಂದಷ್ಟು ಕ್ರಮಗಳನ್ನು ಕೈಗೊಳ್ಳಬೇಕಿದೆ. ಈಗಾಗಲೇ ಬೇರೆ ಬೇರೆ ವಿಚಾರಗಳ ಬಗ್ಗೆ ತನಿಖೆ ಆಗಬೇಕು ಎಂದರು. 
ಇದೇ ವೇಳೆ ಕಾಂಗ್ರೆಸ್ - ಜೆಡಿಎಸ್ ಸೀಟು ಹಂಚಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಗೊಂದಲವಿಲ್ಲದೆ 3-4 ದಿನಗಳಲ್ಲಿ ಎಲ್ಲ ಬಗೆಹರಿಯುತ್ತದೆ. ಕಾಂಗ್ರೆಸ್ ನಾಯಕರಿಗೆ ತಮ್ಮನ್ನು ಭಿಕ್ಷುಕರ ರೀತಿ ನಡೆಸಿಕೊಳ್ಳಬೇಡಿ ಎಂದಿದ್ದೇನೆ. ಯಾವುದೇ ಗೊಂದಲಗಳಿಲ್ಲದೆ ಸೀಟು ಹಂಚಿಕೆ‌ ಪ್ರಕ್ರಿಯೆ ಮುಗಿಯಲಿದೆ ಎಂದರು.
ಸುಮಲತಾ ಅಂಬರೀಶ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ವಿಚಾರದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಚುನಾವಣೆಗೆ ನಿಲ್ಲಬಹುದು. ಚುನಾವಣೆಗೆ ನಿಲ್ಲುವವರಿಗೆ ತಾವು ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.