ರಾಜಕೀಯ

ಮಂಡ್ಯದಿಂದ ಪಕ್ಷೇತರರಾಗಿ ಸುಮಲತಾ ಅಂಬರೀಶ್ ಸ್ಪರ್ಧಿಸಿದ್ರೆ ಕಾಂಗ್ರೆಸ್ ತಟಸ್ಥ ನಿಲುವು!

ಮಾಜಿ ಸಚಿವ ಅಂಬರೀಶ್ ಸುಮಲತಾ ಮಂಡ್ಯದಿಂದ ಸ್ಪರ್ಧೆ ವಿಚಾರವಾಗಿ ಕಾಂಗ್ರೆಸ್‌ ಪಾಳಯದಲ್ಲಿ ಹೊಸ ಲೆಕ್ಕಾಚಾರ ಶುರುವಾಗಿದೆ. ಒಂದು ವೇಳೆ ಸುಮಲತಾ...

ಮಂಡ್ಯದಿಂದ ಪಕ್ಷೇತರರಾಗಿ ಸುಮಲತಾ ಅಂಬರೀಶ್ ಸ್ಪರ್ಧಿಸಿದ್ರೆ ಕಾಂಗ್ರೆಸ್ ತಟಸ್ಥ ನಿಲುವು!
ಸುಮಲತಾ
Published On :
ಬೆಂಗಳೂರು: ಮಾಜಿ ಸಚಿವ ಅಂಬರೀಶ್ ಸುಮಲತಾ ಮಂಡ್ಯದಿಂದ ಸ್ಪರ್ಧೆ ವಿಚಾರವಾಗಿ ಕಾಂಗ್ರೆಸ್‌ ಪಾಳಯದಲ್ಲಿ ಹೊಸ ಲೆಕ್ಕಾಚಾರ ಶುರುವಾಗಿದೆ. ಒಂದು ವೇಳೆ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ತಟಸ್ಥವಾಗಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ. 
ಮೈತ್ರಿ ಸೂತ್ರದಂತೆ ಮಂಡ್ಯ ಕ್ಷೇತ್ರ ಕಾಂಗ್ರೆಸ್‌ ಕೈ ತಪ್ಪುವ ಸಾಧ್ಯತೆ ದಟ್ಟವಾಗಿದೆ. ಜಿಲ್ಲೆಯಲ್ಲಿ  ಜೆಡಿಎಸ್‌ ಪಕ್ಷದ 7 ಶಾಸಕರು ಇದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರು ಸುಮಲತಾ ಸ್ವತಂತ್ರ ಸ್ಪರ್ಧೆಗೆ ಚಕಾರ ಎತ್ತುವುದು ಬೇಡ ಎಂದಿದ್ದಾರೆ. ಸಮಲತಾ ಸ್ಪರ್ಧೆಗೆ ಕಾಂಗ್ರೆಸ್ ಮುಖಂಡರ ಹಾಗೂ ಅಂಬರೀಷ್ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಜೊತೆಗೆ ಅವರ ಮೇಲೆ ಮಂಡ್ಯದ ಜನರಿಗೆ ಅನುಕಂಪಕೂಡ ಇದೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಗೆಲುವು ನಿಶ್ಚಿತವಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳೋಣ ಎಂದು ರಾಜ್ಯ ನಾಯಕರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅವರ ಮಾತಿಗೆ ರಾಜ್ಯ ನಾಯಕರು ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.
ಇದಕ್ಕೂ ಮೊದಲು ಸುಮಲತಾ ಅಂಬರೀಶ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಂಡ್ಯದಿಂದ ಚುನಾವಣೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಜೊತೆಗೆ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯಲು ಅವಕಾಶ ನೀಡಬೇಕೆಂದು ಅವರು ಸಿದ್ದರಾಮಯ್ಯ ಅವರ ಬಳಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಬಗ್ಗೆ ನಿನ್ನೆ ಕೆ.ಸಿ.ವೇಣುಗೋಪಾಲ್ ನೇತೃತ್ವದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗಿದೆ. ಸೀಟು ಹಂಚಿಕೆ ವೇಳೆ ಮೈಸೂರು, ಮಂಡ್ಯ, ಹಾಸನ ಮೂರು ಜಿಲ್ಲೆಗಳಲ್ಲಿ ಒಂದು ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡುವಂತೆ ಪಟ್ಟು ಹಿಡಿಯೋಣ. ಮಂಡ್ಯವನ್ನು ಬಿಟ್ಟುಕೊಡುವಂತೆ ಒತ್ತಡ ಹೇರುವುದು. ಸಾಧ್ಯವಾಗದಿದ್ದರೆ ಮೈಸೂರನ್ನು ಕಾಂಗ್ರೆಸ್ ಪಡೆದುಕೊಳ್ಳುವ ಲೆಕ್ಕಾಚಾರ ಹಾಕಿದ್ದಾರೆ ಎನ್ನಲಾಗಿದೆ.
ಜೊತೆಗೆ ಸುಮಲತಾ ಅಂಬರೀಶ್ ಮಂಡ್ಯದಿಂದ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗಿದ್ದಲ್ಲಿ ಪಕ್ಷೇತರರಾಗಿ ಕಣಕ್ಕಿಳಿಯವು ಸಾಧ್ಯತೆ ಇದೆ. ಅಂಬರೀಶ್ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಸುಮಲತಾ ಗೆಲುವಿಗೆ ಪರೋಕ್ಷವಾಗಿ ಬೆಂಬಲಿಸಲಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಈಗಾಗಲೇ ಆಡಳಿತ ಪಕ್ಷದ ಶಾಸಕರ ವಿರೋಧಿ ಅಲೆ ಆರಂಭವಾಗಿದೆ. ಇದನ್ನೆ ಬಳಸಿಕೊಂಡು ಸುಮಲತಾ ಪಕ್ಷೇತರರಾಗಿ ಕಣಕ್ಕಿಳಿಯುವಂತೆ ಲಾಭ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಒಂದೆಡೆ ಅಂಬರೀಶ್ ಬಗ್ಗೆ ಕಾಂಗ್ರೆಸ್ ನಾಯಕರು ಅನುಕಂಪ ವ್ಯೆಕ್ತಪಡಿಸುವ ಜೊತೆಗೆ ಮಂಡ್ಯ ಕ್ಷೇತ್ರದಿಂದಲೇ ಜೆಡಿಎಸ್ ಗೆ ಪಕ್ಷಕ್ಕೆ ತಕ್ಕ ಪಾಠ ಕಲಿಸಲು ಸುಮಲತಾ ಎಂಬ ಅಸ್ತ್ರವನ್ನು ಪ್ರಯೋಗಿಸಲು  ತೆರೆಮರೆಯಲ್ಲಿ ಯೋಜನೆ ರೂಪಿಸಿದ್ದಾರೆ. ಆದರೆ ಇದನ್ನು ಹೇಗೆ ಕಾರ್ಯಗತಗೊಳಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.