ಖರ್ಗೆ ಪ್ರಧಾನಿಯಾದರೂ ಅಚ್ಚರಿಪಡಬೇಕಿಲ್ಲ- ಶಾಮನೂರು ಶಿವಶಂಕರಪ್ಪ
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಂದಿನ ಪ್ರಧಾನಿಯಾದರೂ ಅಚ್ಚರಿಪಡಬೇಕಿಲ್ಲ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಂದಿನ ಪ್ರಧಾನಿಯಾದರೂ ಅಚ್ಚರಿಪಡಬೇಕಿಲ್ಲ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಛಲವಾದಿ ಮಹಾಸಭಾ ವತಿಯಿಂದ ಏರ್ಪಡಿಸಲಾಗಿದ್ದ ಅಭಿನಂದನಾ ಹಾಗೂ ಜನ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಿವಶಂಕರಪ್ಪ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ತಾಕತ್ತು ರಾಹುಲ್ ಗಾಂಧಿಗೆ ಇಲ್ಲ. ಆದರೆ, ಕಾಂಗ್ರೆಸ್ ಹಿರಿಯ ನಾಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದೆ ಎಂದರು.
ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಅಷ್ಟೇ ಅಲ್ಲ. ದೇಶದ ಪ್ರಧಾನಿಯಾಗುವ ಅರ್ಹತೆ ಹೊಂದಿದ್ದಾರೆ. ಮುಂದೆ ಅವರು ಪ್ರಧಾನಿಯಾದರೂ ಅಚ್ಚರಿಪಡಬೇಕಿಲ್ಲ ಎಂದು ಅಭಿಪ್ರಾಯಪಟ್ಟರು.
ರಾಜ್ಯದ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಮೊದಲ ದಲಿತ ಮುಖಂಡ ದಿವಂಗತ ಕೆ. ಎಚ್ , ರಂಗನಾಥ್, ದಿ. ಬಸವಲಿಂಗಪ್ಪ ಅವರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಇತ್ತು. ಆದರೆ, ಅವರು ಮುಖ್ಯಮಂತ್ರಿ ಆಗಲಿಲ್ಲ. ಈಗ ಮಲ್ಲಿಕಾರ್ಜುನ ಖರ್ಗೆ ಅವರು ಕೇವಲ ರಾಜ್ಯದ ಮುಖ್ಯಮಂತ್ರಿ ಅಷ್ಟೇ ಅಲ್ಲ, ದೇಶದ ಪ್ರಧಾನಿಯಾಗುವ ಅರ್ಹತೆ ಹೊಂದಿದ್ದಾರೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು.
ಇದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ , ನನ್ನಗೆ ಮೂರು ಬಾರಿ ಮುಖ್ಯಮಂತ್ರಿ ಅವಕಾಶ ಕಿತ್ತುಕೊಳ್ಳಲಾಯಿತು. ಬೇಕೋ ಬೇಡವೋ ಎಂಬಂತೆ ಉಪಮುಖ್ಯಮಂತ್ರಿ ಸ್ಥಾನ ನೀಡಿದ್ದಾರೆ. ತಮ್ಮನ್ನು ತುಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


