ರಾಜಕೀಯ

ತಾತ ದೇವೇಗೌಡರು ಚುನಾವಣೆಗೆ ನಿಂತರೆ ಪ್ರಚಾರ ನಡೆಸುತ್ತೇನೆ: ಪ್ರಜ್ವಲ್ ರೇವಣ್ಣ

ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ತಮ್ಮ ತಾತ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಸ್ಪರ್ಧಿಸಿದರೆ ಅವರ ಗೆಲುವಿಗೆ ಜಿಲ್ಲೆಯಲ್ಲಿ ಚುನಾವಣಾ ...

ತಾತ  ದೇವೇಗೌಡರು ಚುನಾವಣೆಗೆ ನಿಂತರೆ ಪ್ರಚಾರ ನಡೆಸುತ್ತೇನೆ: ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ
Published On :
ಹಾಸನ: ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ತಮ್ಮ ತಾತ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಸ್ಪರ್ಧಿಸಿದರೆ ಅವರ ಗೆಲುವಿಗೆ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ಜವಾಬ್ದಾರಿ ವಹಿಸಿಕೊಳ್ಳುವುದಾಗಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.
ಹಾಸನದಲ್ಲಿ ಅವರು ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿ, ಹಾಸನ ಕ್ಷೇತ್ರದಿಂದ ತಮ್ಮನ್ನು ಸ್ಪರ್ಧಿಸುವಂತೆ ತಾತ ಹೆಚ್ ಡಿ ದೇವೇಗೌಡರು ಹೇಳಿದ್ದರು, ಅದರಂತೆ ತಾನು ಮಾನಸಿಕವಾಗಿ ಸಿದ್ದನಾಗಿದ್ದೆ ಎಂದು ಹೇಳಿದ್ದಾರೆ.
ಹಾಸನ ಜಿಲ್ಲೆಯ ಎಲ್ಲಾ ಏಳು ತಾಲ್ಲೂಕುಗಳಲ್ಲಿ ತಾನು ಪ್ರವಾಸ ಮಾಡಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ದೇವೇಗೌಡರ ಸೂಚನೆ ಪ್ರಕಾರ ನಾನು ಕೆಲಸ ಮಾಡುತ್ತೇನೆ. ಈ ಬಾರಿ ಚುನಾವಣೆಯಲ್ಲಿ ದೇವೇಗೌಡರು 5 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಪ್ರಜ್ವಲ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.