ರಾಜಕೀಯ

ನಾನು, ಯಡಿಯೂರಪ್ಪ ಒಳ್ಳೆಯ ಗೆಳೆಯರು: ಸಿದ್ದರಾಮಯ್ಯ

ಸದಾ ಆರೋಪ - ಪ್ರತ್ಯಾರೋಪದಲ್ಲಿ ತೊಡಗುತ್ತಿದ್ದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಬಿಎಸ್ ಯಡಿಯೂರಪ್ಪ...

ನಾನು, ಯಡಿಯೂರಪ್ಪ ಒಳ್ಳೆಯ ಗೆಳೆಯರು: ಸಿದ್ದರಾಮಯ್ಯ
ಸಿದ್ದರಾಮಯ್ಯ - ಬಿಎಸ್ ಯಡಿಯೂರಪ್ಪ
Published On :
ಬೆಂಗಳೂರು: ಸದಾ ಆರೋಪ - ಪ್ರತ್ಯಾರೋಪದಲ್ಲಿ ತೊಡಗುತ್ತಿದ್ದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಆಕಸ್ಮಿಕವಾಗಿ ಹುಬ್ಬಳಿಯ ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದರು. ಇಬ್ಬರು ನಾಯಕರು ಕೆಲ ಕಾಲ ಪರಸ್ಪರ ಉಭಯ ಕುಶಲೋಪರಿ ಸಹ ನಡೆಸಿದರು. 
ಪರಸ್ಪರ ವಾಗ್ದಾಳಿ ನಡೆಸುತ್ತಿದ್ದ ಯಡಿಯೂರಪ್ಪ, ಸಿದ್ದರಾಮಯ್ಯ ಕೆಲವು ನಿಮಿಷಗಳ ಕಾಲ ಕುಶಲೋಪರಿ ನಡೆಸಿದರು. 
ಉಭಯ ನಾಯಕರು ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಒಂದೇ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದ್ದರು. ವಿಮಾನ ನಿಲ್ದಾಣದ ವಿಐಪಿ ಕೊಠಡಿಯಲ್ಲಿ ಮುಖಾಮುಖಿಯಾದ ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಅವರು ಒಬ್ಬರಿಗೊಬ್ಬರು ಹಸ್ತಲಾಘವ ಮಾಡಿ, ಆತ್ಮೀಯವಾಗಿ ಮಾತುಕತೆ ನಡೆಸಿದರು. ನಂತರ ಅಲ್ಲಿಂದೆ ಬೇರೆ ಬೇರೆ ಕಾರ್ಯಕ್ರಮಗಳಿಗೆ ತೆರಳಿದರು.
ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, 'ರಾಜಕೀಯ ಜೀವನದ ಹೊರತಾಗಿ ಯಡಿಯೂರಪ್ಪನವರು ಮತ್ತು ನಾನು ಒಳ್ಳೆಯ ಗೆಳೆಯರು. ಇಲ್ಲಿ ಅಧಿಕಾರ, ಅಂತಸ್ತು ಯಾವುದೂ ಶಾಶ್ವತವಲ್ಲ, ಕೊನೆಗೊಂದು ದಿನ‌ ಗೆಲ್ಲುವುದು ನಮ್ಮ ನಡುವಿನ ಮಾನವೀಯ ಸಂಬಂಧಗಳು ಮಾತ್ರ. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾದೆ' ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.