ಭಯೋತ್ಪಾದಕರನ್ನು ಮುಗಿಸೋದಾದ್ರೆ ಮುಗಿಸಿ: ಪ್ರಧಾನಿ ಮೋದಿಗೆ ದೇವೇಗೌಡರ ಬೆಂಬಲ!
ಪಾಕಿಸ್ತಾನ ನೆಲಕ್ಕೆ ನುಗ್ಗಿ ಭಾರತೀಯ ವಾಯುಸೇನೆ ಏರ್ ಸ್ಟ್ರೈಕ್ ನಡೆಸಿದ ಬೆನ್ನಲ್ಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ...

Published On :
ಹಾಸನ: ಪಾಕಿಸ್ತಾನ ನೆಲಕ್ಕೆ ನುಗ್ಗಿ ಭಾರತೀಯ ವಾಯುಸೇನೆ ಏರ್ ಸ್ಟ್ರೈಕ್ ನಡೆಸಿದ ಬೆನ್ನಲ್ಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಯೋತ್ಪಾದಕರನ್ನು ಮುಗಿಸೋದಾದ್ರೆ ಮುಗಿಸಿ ನಿಮ್ಮಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ.
ದೇಶದ ಮೇಲೆ ದಾಳಿ ನಡೆದಾಗ ನಾವೆಲ್ಲರೂ ಒಂದಾಗಿ ಹೋರಾಟ ಮಾಡಬೇಕು. ಉಗ್ರರನ್ನು ಮುಗಿಸುವುದಾದರೇ ಖಂಡಿತ ಮುಗಿಸಿ ಅದಕ್ಕೆ ನಮ್ಮ ಬೆಂಬಲವಿದೆ. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೈ ಜವಾನ್ ಜೈ ಕಿಸಾನ್ ಎಂಬ ಮಾತಿನಂತೆ ನಾವೆಲ್ಲರೂ ದೇಶಕ್ಕಾಗಿ ಒಗ್ಗಟ್ಟಾಗಬೇಕು ಎಂದು ದೇವೇಗೌಡ ಅವರ ಹೇಳಿದರು.
ಇದೇ ವೇಳೆ ರೈತರ ಕುರಿತು ಪ್ರಧಾನಿ ಮೋದಿ ಯಾವುದೇ ಯೋಜನೆಗಳನ್ನು ಮಾಡಿಲ್ಲ. ಆದರೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರತಿ ರೈತರ ಕುಟುಂಬಕ್ಕೆ 6 ಸಾವಿರ ರುಪಾಯಿ ನೀಡುತ್ತೇನೆ ಎಂದು ಹೇಳುತ್ತಿರುವುದು ಯಾವ ಉದ್ದೇಶಕ್ಕೆ ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿterroristsಪಾಕಿಸ್ತಾನHD DevegowdaIndian Air Forceಐಎಎಫ್ ವಾಯುದಾಳಿBalakot Terror Campಬಾಲಾಕೋಟ್ ಉಗ್ರ ಕ್ಯಾಂಪ್IAF Air strikes in Pakistanಹೆಚ್ ಡಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


