ರಾಜಕೀಯ

'ಮಂಡ್ಯ' ಟಿಕೆಟ್ ಹಂಚಿಕೆ ಕುರಿತು ಡಿಕೆಶಿ ಹೇಳಿಕೆ; ಕುತೂಹಲ ಮೂಡಿಸಿದ ಸುಮಲತಾ ಮುಂದಿನ ನಡೆ

ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪೈಕಿ ಕುತೂಹಲ ಹುಟ್ಟಿಸಿರುವ ಕ್ಷೇತ್ರಗಳ ...

'ಮಂಡ್ಯ' ಟಿಕೆಟ್ ಹಂಚಿಕೆ ಕುರಿತು ಡಿಕೆಶಿ ಹೇಳಿಕೆ; ಕುತೂಹಲ ಮೂಡಿಸಿದ ಸುಮಲತಾ ಮುಂದಿನ ನಡೆ
ಸುಮಲತಾ ಅಂಬರೀಷ್
Published On :
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪೈಕಿ ಕುತೂಹಲ ಹುಟ್ಟಿಸಿರುವ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರ ಮುಖ್ಯವಾದುದು. ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ನಡುವೆ ಸೀಟು ಹಂಚಿಕೆ ವಿಚಾರದಲ್ಲಿ ಇಲ್ಲಿ ಕೊನೆಯದಾಗಿ ಟಿಕೆಟ್ ಯಾವ ಪಕ್ಷಕ್ಕೆ ಸಿಗಲಿದೆ ಎನ್ನುವ ಕುತೂಹಲ ಎಲ್ಲರಲ್ಲಿಯೂ ಇದೆ. ಹಾಗೆಯೇ ಇದು ಎರಡೂ ಪಕ್ಷಗಳಿಗೆ ನುಂಗಲಾರದ ಬಿಸಿ ತುಪ್ಪವಾಗಿರುವುದಂತೂ ಸತ್ಯ.
ಲೋಕಸಭಾ ಚುನಾವಣೆಗೆ ಮುನ್ನ ಆಗಿರುವ ಒಪ್ಪಂದದಂತೆ ಜೆಡಿಎಸ್ ಗೆ ಟಿಕೆಟ್ ನೀಡಲಿದೆ ಎಂದು ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಹೇಳಿದ್ದರೂ ಕೂಡ ಅವರ ಹೇಳಿಕೆಯನ್ನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಸುಮಲತಾ ಅಂಬರೀಷ್ ನಿರಾಕರಿಸಿದ್ದಾರೆ. ಶಿವಕುಮಾರ್ ಅವರು ಕೇವಲ ತಮ್ಮ ಅಭಿಪ್ರಾಯವನ್ನಷ್ಟೇ ಹೇಳಿದ್ದಾರೆ ಎಂದರು.
ಮಂಡ್ಯ ಕ್ಷೇತ್ರದಲ್ಲಿ ಮಾಜಿ ನಟ ಹಾಗೂ ರಾಜಕಾರಣಿ ದಿವಂಗತ ಅಂಬರೀಷ್ ಜನಪ್ರಿಯ, ಜಿಲ್ಲೆಯಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಮರಣ ನಂತರ ಅವರ ಅಭಿಮಾನಿಗಳು ಸುಮಲತಾ ಅವರಲ್ಲಿ ರಾಜಕೀಯಕ್ಕೆ ಬರುವಂತೆ ಒತ್ತಾಯಿಸುತ್ತಿದ್ದು ಸುಮಲತಾ ಕೂಡ ನಾಡಿದ್ದು ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಟಿಕೆಟ್ ನಿರಾಕಸಿದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸೂಚನೆ ಕೂಡ ನೀಡಿದ್ದಾರೆ.
ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ ಅವರು, ಜನರ ಬೆಂಬಲದ ಮೂಲಕ ನಾನು ಕಾಂಗ್ರೆಸ್ ನಾಯಕರಲ್ಲಿ ಟಿಕೆಟ್ ಕೇಳುತ್ತೇನೆ. ಸೀಟು ಹಂಚಿಕೆ ವಿಚಾರದಲ್ಲಿ ಎರಡೂ ಪಕ್ಷಗಳಲ್ಲಿ ಸಾಕಷ್ಟು ಚರ್ಚೆ ನಡೆದು ತೀರ್ಮಾನಕ್ಕೆ ಬರಬೇಕಾಗಿದೆ. ನಾನು ಒಂದೇ ಸಲಕ್ಕೆ ನಿರ್ಧಾರಕ್ಕೆ ಬಂದು ನನಗೆ ಟಿಕೆಟ್ ಕೊಡುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ, ಟಿಕೆಟ್ ಹಂಚಿಕೆ ಕಷ್ಟವಾಗಿದೆ ಎಂದು ಸುಮಲತಾ ಒಪ್ಪಿಕೊಳ್ಳುತ್ತಾರೆ.
ತಮಗೆ ಕ್ಷೇತ್ರದ ಜನತೆಯ ಬೆಂಬಲವಿದೆ ಎಂಬ ವಿಶ್ವಾಸದಲ್ಲಿ ಸುಮಲತಾ ಇದ್ದಾರೆ. ಅಂಬರೀಷ್ ಅವರ ಪರಂಪರೆ ಮತ್ತು ಕನಸುಗಳನ್ನು ಮುನ್ನಡೆಸಿಕೊಂಡು ಹೋಗಬೇಕಾಗಿದೆ. ಹೀಗಾಗಿ ನಾನು ರಾಜಕೀಯಕ್ಕೆ ಸೇರಿದೆ. ಮಂಡ್ಯ ಜನರ ಒತ್ತಾಸೆ ಮೇರೆಗೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಹೇಳಿದರು.
ಟಿಕೆಟ್ ನೀಡುವ ಮತ್ತು ಸ್ಪರ್ಧಿಸುವ ವಿಚಾರದಲ್ಲಿ ನಾನು ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮ್ಯನವರನ್ನು ಮಾತ್ರ ಭೇಟಿ ಮಾಡಿ ಚರ್ಚಿಸಿದ್ದೇನೆ, ಮೈತ್ರಿಯಿಂದಾಗಿ ತಾನು ಈ ವಿಷಯದಲ್ಲಿ ಅಸಹಾಯಕನಾಗಿದ್ದೇನೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.