ರಾಜಕೀಯ

ಲೋಕಸಭೆಗೆ ಸೀಟು ಹಂಚಿಕೆಯನ್ನು ಜನವರಿಯೊಳಗೆ ಮುಗಿಸಿ: ಕಾಂಗ್ರೆಸ್ ಗೆ ದೇವೇಗೌಡರ ತಾಕೀತು

ಸಮ್ಮಿಶ್ರ ಸರ್ಕಾರದ ಮೈತ್ರಿಕೂಟಗಳ ನಡುವೆ ಹೊಂದಾಣಿಕೆ ಸಮಸ್ಯೆ ಆಗಾಗ ಕಾಣಿಸಿಕೊಳ್ಳುತ್ತಿರುವುದರ ...

ಲೋಕಸಭೆಗೆ ಸೀಟು ಹಂಚಿಕೆಯನ್ನು ಜನವರಿಯೊಳಗೆ ಮುಗಿಸಿ: ಕಾಂಗ್ರೆಸ್ ಗೆ ದೇವೇಗೌಡರ ತಾಕೀತು
ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ
Published On :

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೈತ್ರಿಕೂಟಗಳ ನಡುವೆ ಹೊಂದಾಣಿಕೆ ಸಮಸ್ಯೆ ಆಗಾಗ ಕಾಣಿಸಿಕೊಳ್ಳುತ್ತಿರುವುದರ ಮಧ್ಯೆ ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಹಂಚಿಕೆ ಈ ತಿಂಗಳೊಳಗೆ ಇತ್ಯರ್ಥವಾಗಬೇಕೆಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಕಾಂಗ್ರೆಸ್ ಗೆ ಷರತ್ತು ವಿಧಿಸಿದ್ದಾರೆ ಎಂದು ತಿಳಿದುಬಂದಿದೆ.

ಸಮ್ಮಿಶ್ರ ಸರ್ಕಾರದ ಮೈತ್ರಿಕೂಟಗಳ ಒಡಂಬಡಿಕೆಯಂತೆ 1/3ರ ಅನುಪಾತದಲ್ಲಿ ಲೋಕಸಭೆಗೆ ಕ್ಷೇತ್ರಗಳನ್ನು ಹಂಚಿಕೆ ಮಾಡಿದರೆ ಜೆಡಿಎಸ್ ಗೆ ಕರ್ನಾಟದಲ್ಲಿ ಒಟ್ಟು 28 ಲೋಕಸಭೆ ಕ್ಷೇತ್ರಗಳ ಪೈಕಿ 10-11 ಕ್ಷೇತ್ರಗಳು ಲಭ್ಯವಾಗಲಿದೆ. ಆದರೆ ಇಂಥ ಕ್ಷೇತ್ರಗಳೇ ತನಗೆ ಬೇಕೆಂದು ಜೆಡಿಎಸ್ ಸದ್ಯಕ್ಕೆ ಬೇಡಿಕೆ ಇಟ್ಟಂತಿಲ್ಲ.

ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಸರ್ಕಾರ ರಚಿಸಲು ಕಾಂಗ್ರೆಸ್ ನಮಗೆ ಷರತ್ತು ರಹಿತ ಬೆಂಬಲ ನೀಡಿದೆ. ನಮ್ಮಲ್ಲಿ 1/3ರ ಅನುಪಾತದಲ್ಲಿ ಒಡಂಬಡಿಕೆಯಾಗಿದ್ದು ಅದು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಹಂಚಿಕೆಯಲ್ಲಿ ಕೂಡ ಅನ್ವಯವಾಗಲಿದೆ. ಈ ಬಗ್ಗೆ ಈ ತಿಂಗಳೇ ತೀರ್ಮಾನ ಮಾಡಲಾಗುವುದು ಎಂದು ದೇವೇಗೌಡರು ನಿನ್ನೆ ದೆಹಲಿಯಲ್ಲಿ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಟಿಕೆಟ್ ಹಂಚಿಕೆ ಕುರಿತು ಕಾಂಗ್ರೆಸ್-ಜೆಡಿಎಸ್ ಮಧ್ಯೆ ಯಾವುದೇ ಮಾತುಕತೆ ನಡೆದಿಲ್ಲ. ಅದನ್ನು ಮೈತ್ರಿಕೂಟಗಳ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ ಬಳಿಕ ದೇವೇಗೌಡರಿಂದ ಈ ಪ್ರತಿಕ್ರಿಯೆ ಬಂದಿದೆ.

ಇನ್ನು ನಿನ್ನೆ ಮಾತನಾಡುವಾಗ ಸಿದ್ದರಾಮಯ್ಯನವರನ್ನು ಬೆಂಬಲಿಸಿದ ದೇವೇಗೌಡರು, ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಹೊಂಚುಹಾಕುತ್ತಿದೆ. ಕುದುರೆ ವ್ಯಾಪಾರಕ್ಕೆ ಬಿಜೆಪಿ ನಾಯಕರು ಕೈ ಹಾಕುತ್ತಿದ್ದಾರೆ ಎಂದು ಸಿದ್ದರಾಮಯ್ಯನವರು ಹೇಳುವುದರಲ್ಲಿ ಅರ್ಥವಿದೆ. ಆದರೆ ಸರ್ಕಾರಕ್ಕೆ ಯಾವುದೇ ಧಕ್ಕೆಯಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.