ದೇಶದಲ್ಲಿಯೇ ರಾಜ್ಯವನ್ನು ನಂಬರ್ ಒನ್ ಮಾಡುವಲ್ಲಿ ವಿಫಲವಾದರೆ ಜೆಡಿಎಸ್ ಕಚೇರಿಗೆ ಬೀಗ: ಎಚ್ ಡಿಕೆ
ಮುಂದಿನ ಚುನಾವಣೆಯಲ್ಲಾದರೂ ನಾಡಿನ ಜನತೆ ಐದು ವರ್ಷಗಳ ಕಾಲ ಆಡಳಿತ ನಡೆಸಲು ಜೆಡಿಎಸ್ ಪಕ್ಷಕ್ಕೆ ಸ್ವಂತ ಶಕ್ತಿ ....

Published On :
ಬೆಂಗಳೂರು: ಮುಂದಿನ ಚುನಾವಣೆಯಲ್ಲಾದರೂ ನಾಡಿನ ಜನತೆ ಐದು ವರ್ಷಗಳ ಕಾಲ ಆಡಳಿತ ನಡೆಸಲು ಜೆಡಿಎಸ್ ಪಕ್ಷಕ್ಕೆ ಸ್ವಂತ ಶಕ್ತಿ ಕೊಡಬೇಕು. ಬಹುಮತ ನೀಡಿದರೆ ದೇಶದಲ್ಲಿಯೇ ರಾಜ್ಯವನ್ನು ನಂಬರ್ ಒನ್ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಜೆಡಿಎಸ್ ಪಕ್ಷದ ಕಚೇರಿಗೆ ಬೀಗ ಹಾಕಿ ಕಟ್ಟಡವನ್ನು ನೆಲಸಮ ಮಾಡುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಲೋಕಸಭೆ ಚುನಾವಣೆ ಸಂಬಂಧ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ರೈತರ ಸಾಲ ಮನ್ನಾ ಕುರಿತಂತೆ ಪ್ರತಿಪಕ್ಷಗಳು ಮಾಡುತ್ತಿರುವ ಎಲ್ಲ ಟೀಕೆಗೆ ಉತ್ತರ ಕೊಡಲು ಮುಂದಾಗಿದ್ದಾರೆ ಫೆ. 8 ರಂದು ಮಂಡಿಸಲಿರುವ ಬಜೆಟ್‌ನಲ್ಲಿ ಬ್ಯಾಂಕುಗಳಿಗೆ ನೀಡಬೇಕಾದ ಸಾಲದ ಮೊತ್ತವನ್ನು ನಾಲ್ಕು ಕಂತುಗಳ ಬದಲು ಒಂದೇ ಕಂತಿನಲ್ಲಿ ಪಾವತಿಸುವ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.
ಫೆ.8ರಂದು ಬಜೆಟ್ ಮಂಡನೆ ಮಾಡುವ ಉದ್ದೇಶವನ್ನು ಹೊಂದಿದ್ದೇನೆ. ಬಜೆಟ್ ಘೋಷಣೆ ವೇಳೆ ಸಾಲಮನ್ನಾ ಯೋಜನೆಯ ಸಂಪೂರ್ಣ ಮೊತ್ತ 46 ಸಾವಿರ ಕೋಟಿ ರು.ಗಳನ್ನು ಮುಂದಿನ ಆರ್ಥಿಕ ಸಾಲಿನಲ್ಲಿ ಚುಕ್ತಾ ಮಾಡುವ ಬಗ್ಗೆ ಪ್ರಕಟಿಸಲಾಗುವುದು. ರೈತರಲ್ಲಿ ಅವಿಶ್ವಾಸ ಮೂಡಿಸುವ ಪ್ರತಿಪಕ್ಷಗಳ ಹುನ್ನಾರಕ್ಕೆ ಆಸ್ಪದ ನೀಡಬಾರದು ಎಂಬ ಕಾರಣಕ್ಕಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಹೇಳಿದರು
ಇನ್ನೂ ಲೋಕಸಭೆ ಚುನಾವಣೆ ಸೀಟು ಹಂಚಿಕೆ ಬಗ್ಗೆ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ ಮತ್ತು ಕುಮಾರ ಸ್ವಾಮಿ, ಈ ವಿಷಯ ಇನ್ನೂ ಚರ್ಚೆಯಾಗುತ್ತಿದೆ, ಕಾಂಗ್ರೆಸ್ ನವರು ನಮ್ಮನ್ನು ಸರಿಯಾಗಿ ನಡೆಸಿಕೊಳ್ಳಬೇಕು ನಡೆಸಿಕೊಳ್ಳುತ್ತಾರೆ ಎಂಬ ವಿಶ್ವಾಸ ಇರುವುದಾಗಿ ತಿಳಿಸಿದ್ದಾರೆ,
ಸಮ್ಮಿಶ್ರ ಸರ್ಕಾರದ ನಿಯಮದಂತೆ 2:1 ಪ್ರಮಾಣದಲ್ಲಿ ಸೀಟು ಹಂಚಿಕೆ ಮಾಡಬೇಕು, ಜೆಡಿಎಸ್ ಕಾರ್ಯಕರ್ತರು10-12 ಸೀಟು ಕೇಳುತ್ತಿದ್ದಾರೆ, ಕಾಂಗ್ರೆಸ್ ಮೈತ್ರಿ ಯೊಂದಿಗೆ ಲೋಕಸಭೆ ಚುನಾವಣೆ ಎದುರಿಸಲು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


