ರಾಜಕೀಯ

ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಆತ್ಮಹತ್ಯೆಗೆ ಯತ್ನ, ಅದೃಷ್ಟವಶಾತ್ ಬಚಾವ್

ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು....

ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಆತ್ಮಹತ್ಯೆಗೆ ಯತ್ನ, ಅದೃಷ್ಟವಶಾತ್ ಬಚಾವ್
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೂಳಿಹಟ್ಟಿ ಶೇಖರ್
Published On :
ಚಿತ್ರದುರ್ಗ: ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ.
ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು.
ಈ ವೇಳೆ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿಹಚ್ಚಿಕೊಳ್ಳಲು ಯತ್ನಿಸಿದಾಗ ಬೆಂಬಲಿಗರು ಅದನ್ನು ತಡೆದಿದ್ದಾರೆ.
ಗೂಳಿಹಟ್ಟಿ ಶೇಖರ್ ಅವರ ಕಿವಿ, ಮೂಗು, ಬಾಯೊಳಗೆ ಪೆಟ್ರೋಲ್ ಹರಿದುಹೋಗಿದೆ. ಬೆಂಬಲಿಗರು ಸರಿಯಾದ ಸಮಯಕ್ಕೆ ಅವರನ್ನು ತಡೆಯದೇ ಹೋಗಿದ್ದರೆ ಬೆಂಕಿ ಕಡ್ಡಿ ಗೀರಿಕೊಂಡಿರುತ್ತಿದ್ದರೆನ್ನಲಾಗಿದೆ. 
ಗೂಳಿಹಟ್ಟಿ ಶೇಖರ್ ಅವರನ್ನು ಸದ್ಯಕ್ಕೆ ಹೊಸದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.