ಪ್ರಕಾಶ್ ರೈ ಪ್ರಬಲ ಸ್ಪರ್ಧಿ, ಅವರಿಗೆ ನಮ್ಮ ಬೆಂಬಲ: ಆಮ್ ಆದ್ಮಿ ಪಕ್ಷ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ನಟ ಪ್ರಕಾಶ್ ರೈ ಘೋಷಿಸಿದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷ ಪ್ರಕಾಶ್ ರೈ ಅವರಿಗೆ ಅಧಿಕೃತ ಬೆಂಬಲ ಘೋಷಿಸಿದೆ.

Published On :
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ನಟ ಪ್ರಕಾಶ್ ರೈ ಘೋಷಿಸಿದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷ ಪ್ರಕಾಶ್ ರೈ ಅವರಿಗೆ ಅಧಿಕೃತ ಬೆಂಬಲ ಘೋಷಿಸಿದೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದೆಹಲಿ, ಪಂಜಾಬ್, ಹರ್ಯಾಣ ಮತ್ತು ಗೋವಾ ಗಳಲ್ಲಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಕರ್ನಾಟಕ ಎಎಪಿ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದ್ದಾರೆ. ಆದರೆ ಬೆಂಗಳೂರಿನಂತ ಸಿಟಿಗಳಲ್ಲಿ ಆಯ್ದ ಅಭ್ಯರ್ಥಿಗಳಿಗೆ ಬೆಂಬಲ ನೀಡಲಾಗುತ್ತದೆ. ಉದಾಹರಣೆಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸುವ ಪ್ರಕಾಶ್ ರಾಜ್ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
ಕಳೆದ ಬಾರಿ ಬೆಂಗಳೂರು ದಕ್ಷಿಣದಿಂದ ಬಿಜೆಪಿ ಅನಂತ್ ಕುಮಾರ್ ಅವರ ವಿರುದ್ಧ ಕ್ಯಾಪ್ಟನ್ ಗೋಪಿನಾಥ್ ಸ್ಪರ್ಧಿಸಿದ್ದು, ಜಾತ್ಯಾತೀತ ಮತಗಳನ್ನು ವಿಭಜಿಸಿದ್ದರು, ಪ್ರಕಾಶ್ ರಾಜ್ ಪ್ರಬಲ ಅಭ್ಯರ್ಥಿ, ಅವರ ಸ್ಪರ್ಧೆಯಿಂದ ಮತಗಳು ವಿಭಜನೆಯಾಗುವುದಿಲ್ಲ, ಆದರೆ ಎಲ್ಲಾ ಧರ್ಮಗಳ ಮತಗಳನ್ನು ಒಗ್ಗೂಡಿಸುತ್ತವೆ ಎಂದು ಹೇಳಿದ್ದಾರೆ,
ಬೆಂಗಳೂರು ನಗರದಲ್ಲಿ 8 ವಿಧಾನಸಭೆ ಕ್ಷೇತ್ರಗಳಿದ್ದು, 5ರಲ್ಲಿ ಕಾಂಗ್ರೆಸ್ ಮತ್ತು ಮೂರು ಬಿಜೆಪಿ ಶಾಸಕರಿದ್ದಾರೆ, ಎಎಪಿಯ ಯಾವುದೇ ಶಾಸಕರು ಇಲ್ಲ, ಹೀಗಾಗಿ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸುವ ಪ್ರಕಾಶ್ ರೈ ಅವರಿಗೆ ಬೆಂಬಲ ವ್ಯಕ್ತ ಪಡಿಸುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


