ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದೇನೆ: ಎಚ್.ಎಂ ರೇವಣ್ಣ
ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವ ಆಸಕ್ತಿ ನನಗಿದೆ. ರಾಜಕೀಯದಲ್ಲಿ ಸಕ್ರಿಯವಾಗಿರಲು ಟಿಕೆಟ್ ಕೇಳಿದ್ದೇನೆ ಎಂದು ಮಾಜಿ ಸಚಿವ ಎಚ್.ಎಂ ರೇವಣ್ಣ....

Published On :
ರಾಯಚೂರು: ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವ ಆಸಕ್ತಿ ನನಗಿದೆ. ರಾಜಕೀಯದಲ್ಲಿ ಸಕ್ರಿಯವಾಗಿರಲು ಟಿಕೆಟ್ ಕೇಳಿದ್ದೇನೆ ಎಂದು ಮಾಜಿ ಸಚಿವ ಎಚ್.ಎಂ ರೇವಣ್ಣ ಹೇಳಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಅವರು, ಈ ಮೊದಲು ರಾಹುಲ್ ಗಾಂಧಿ ಆದೇಶದ ಮೇರೆಗೆ ನನ್ನದಲ್ಲದ ಕ್ಷೇತ್ರದಿಂದ ಸ್ಪರ್ಧಿಸಿದ್ದೆ, ಆದರೆ ಈ ಬಾರಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ದಳ ಸಮ್ಮಿಶ್ರವಾಗಿ ಸರ್ಕಾರ ನಡೆಯುತ್ತಿದೆ. ಜಾತ್ಯತೀತ ಚಿಂತನೆ ಹಾಗೂ ರಾಜ್ಯದ ಹಿತದೃಷ್ಟಿಯಿಂದ ನಾವು ಸಮ್ಮಿಶ್ರ ಸರ್ಕಾರ ಮಾಡಿದ್ದೇವೆ. ಕೊಮುವಾದಿ ಬಿಜೆಪಿಯನ್ನು ದೂರ ಇಡುವುದು ನಮ್ಮ ಉದ್ದೇಶ ಎಂದು ಹೇಳಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲೂ ನಾವು ಒಂದಾಗುತ್ತಿದ್ದೇವೆ. ಮೋದಿಯವರು ಜನಪರ ಕಾರ್ಯಕ್ರಮಗಳನ್ನು ಮಾಡುವುದರಲ್ಲಿ ವಿಫಲರಾಗಿದ್ದಾರೆ.
ಮನ್ ಕಿ ಬಾತ್‌ನಿಂದ ಜನರ ಹೊಟ್ಟೆ ತುಂಬುವುದಿಲ್ಲ. ಮುಂದಿನ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಮುಂದಿನ ದಿನಗಳಲ್ಲಿ ರಾಷ್ಟ್ರದಿಂದ ಬಿಜೆಪಿಯನ್ನು ಹೊರಗಿಡಬೇಕು. ಹಾಗಾಗಿ ಮಹಾಘಟಬಂಧನ್ ಮಾಡಿಕೊಂಡಿದ್ದೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್loksabha electionಲೋಕಸಭೆ ಚುನಾವಣೆH.M Revannaಎಚ್.ಎಂ ರೇವಣ್ಣBengaluru Northಬೆಂಗಳೂರು ಉತ್ತರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


