ರಾಷ್ಟ್ರಪತಿ ಆಡಳಿತ ಮಾಧ್ಯಮ ಸೃಷ್ಟಿ, ಯಾರೂ ಬಿಜೆಪಿಗೆ ಹೋಗಲ್ಲ: ಸಿಎಂ ಕುಮಾರಸ್ವಾಮಿ
ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬರಲಿದೆ ಎಂಬುದು ಕೇವಲ ಮಾಧ್ಯಮ ಸೃಷ್ಟಿ. ನಮ್ಮ ಸರ್ಕಾರ ಸ್ಥಿರವಾಗಿದ್ದು, ಯಾರೂ...

Published On :
ಮೈಸೂರು: ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬರಲಿದೆ ಎಂಬುದು ಕೇವಲ ಮಾಧ್ಯಮ ಸೃಷ್ಟಿ. ನಮ್ಮ ಸರ್ಕಾರ ಸ್ಥಿರವಾಗಿದ್ದು, ಯಾರೂ ಬಿಜೆಪಿಗೆ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.
ಇಂದು ಮೈಸೂರಿನಲ್ಲಿ ಬಿಜೆಪಿ ಆಪರೇಷನ್ ಕಮಲದ ಬಗ್ಗೆ ಮತ್ತು ರಾಷ್ಟ್ರಪತಿ ಆಡಳಿತದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ಬಿಜೆಪಿಯವರು ಯಾರನ್ನು ಸಂಪರ್ಕಿಸಿದ್ದಾರೆಂದು ಗೊತ್ತು. ಯಾವ್ಯಾವ ಉಡುಗೊರೆ ನೀಡಿ ಆಮಿಷವೊಡ್ಡಿದ್ದಾರೆಂದೂ ತಿಳಿದಿದೆ. ಎಲ್ಲವನ್ನೂ ನಾನು ಗಮನಿಸುತ್ತಿದ್ದೇನೆ. ಆದರೆ, ಯಾರೂ ಪಕ್ಷ ಬಿಡುವ ಸ್ಥಿತಿಯಲ್ಲಿಲ್ಲ ಎಂದರು.
ಸಮ್ಮಿಶ್ರ ಸರ್ಕಾರ ಪತನವಾಗುತ್ತದೆ. ಜನವರಿ 17ರಂದು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗುತ್ತದೆ ಎಂಬ ವರದಿಯನ್ನು ನಾನು ಕೆಲ ಮಾಧ್ಯಮಗಳಲ್ಲಿ ನೋಡಿದ್ದೇನೆ. ಇಂತಹ ಸುಳ್ಳು ಸುದ್ದಿಯನ್ನು ಮಾಧ್ಯಮಕ್ಕೆ ನೀಡುತ್ತಿರುವವರು ಯಾರೂ ಅಂತ ನನಗೆ ಗೊತ್ತಿಲ್ಲ. ಆದರೆ ಅದನ್ನು ನೋಡಿ ನನಗೆ ಅಚ್ಚರಿಯಾಯಿತು ಎಂದರು.
ಈ ರೀತಿಯ ಸುಳ್ಳು ಸುದ್ದಿಗಳಿಂದ ಯಾರಿಗೆ ಲಾಭವಾಗುತ್ತದೆ ಎಂಬುದು ನನಗೆ ಗೊತ್ತಿಲ್ಲ. ಆದರೆ ಈ ರೀತಿಯ ಸುದ್ದಿಗಳಿಂದ ರಾಜ್ಯದ ಜನತೆಗೆ ನಷ್ಟ ಎಂದರು ಸಿಎಂ ಹೇಳಿದ್ದಾರೆ.
ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರ ಸ್ಥಿರವಾಗಿದೆ. ಸರ್ಕಾರ ಬೀಳಿಸುವ ಬಿಜೆಪಿ ಯತ್ನ ಫಲ ನೀಡುವುದಿಲ್ಲ. ಬಿಜೆಪಿಯವರ ಯಾವ ಪ್ರಯತ್ನಗಳೂ ಸಫಲವಾಗಲ್ಲ ಎಂದರು.
ಮುಂಬೈನಲ್ಲಿರುವ ಮೂವರು ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಅವರು ನನಗೆ ಹೇಳಿಯೇ ಮುಂಬೈಗೆ ಹೋಗಿದ್ದಾರೆ. ರೈತರ ಬಗ್ಗೆ ಬಿಜೆಪಿಯವರು ಕನಿಕರ ತೋರಿಸೋದು ಬೇಡ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


