ಅಂಬಿ ಸ್ಮರಣೆಗೆ 'ದಳ' ಪತಿಗಳ ಗೈರು: ಜೆಡಿಎಸ್ ನಡೆಗೆ ಅಸಮಾಧಾನ; ಮಂಡ್ಯ ಕ್ಷೇತ್ರಕ್ಕೆ ನಿಖಿಲ್-ಅಭಿಷೇಕ್ ಪೈಪೋಟಿ!
ಮಂಡ್ಯದ ಎಲ್ಲಾ ಶಾಸಕರು, ಸಚಿವರು ಹಾಗೂ ಸಿಎಂ ಸೇರಿದಂತೆ ಹಲವು ಜೆಡಿಎಸ್ ಮುಖಂಡರು ಭಾಗವಹಿಸುತ್ತಾರೆ ಎಂದು ಹೇಳಲಾಗಿತ್ತು...

Published On :
ಮಂಡ್ಯ: ಮಾಜಿ ಸಚಿವ ರೆಬೆಲ್ ಸ್ಟಾರ್ ದಿವಂಗತ ಅಂಬರೀಷ್ ಅವರ ಪುಣ್ಯಸ್ಮರಣೆ ಹಾಗೂ ಶ್ರದ್ದಾಂಜಲಿ ಕಾರ್ಯಕ್ರಮವನ್ನು ಶನಿವಾರ ಮಂಡ್ಯದಲ್ಲಿ ಆಯೋಜಿಸಲಾಗಿತ್ತು.
ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘ ಹಮ್ಮಿಕೊಂಡಿದ್ದ ಅಂಬಿ ನುಡಿ ನಮನ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಹಾಜರಾಗಿದ್ದರು. ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ, ಹಾಗೂ ದೇವೇಗೌಡರು ಗೈರಾಗಿದ್ದರು.
ಮಂಡ್ಯದ ಎಲ್ಲಾ ಶಾಸಕರು, ಸಚಿವರು ಹಾಗೂ ಸಿಎಂ ಸೇರಿದಂತೆ ಹಲವು ಜೆಡಿಎಸ್ ಮುಖಂಡರು ಭಾಗವಹಿಸುತ್ತಾರೆ ಎಂದು ಹೇಳಲಾಗಿತ್ತು, ಆದರೆ ಯಾರೋಬ್ಬರು ಬಾರದಿರುವುದು ಮಂಡ್ಯ ಜನರ ಆಕ್ರೋಶಕ್ಕೆ ಕಾರಣವಾಗಿದೆ,
ಅಂಬರೀಷ್ ನಿಧನರಾದ ವೇಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಕುಮಾರ ಸ್ವಾಮಿ ಅಂಬಿ ತವರು ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೈರಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಎಚ್ಡಿಕೆ ಗೈರಿನ ಹಿನ್ನೆಲೆಯಲ್ಲಿ ರಾಜಕೀಯ ಲೆಕ್ಕಾಚಾರ ಇದೆ ಎಂದು ಹೇಳಲಾಗುತ್ತಿದೆ. ಅಂಬರೀಷ್ ನಿಧನದ ನಂತರ, ತೆರವಾಗಿರುವ ಮಂಡ್ಯ ಕ್ಷೇತ್ರಕ್ಕೆ ಈಗಾಗಲೇ ಪೈಪೋಟಿ ಆರಂಭವಾಗಿದೆಸ ಅಭಿಷೇಕ್ ಅವರು ರಾಜಕೀಯಕ್ಕೆ ಬರಬೇಕು , ಅವರ ಬೆನ್ನಿಗೆ ನಾವಿದ್ದೇವೆ ಎಂದು ಇಲ್ಲಿನ ಜನ ಈಗಾಗಲೇ ಬೆಂಬಲ ಘೋಷಿಸಿದ್ದಾರೆ, ಅಭಿಷೇಕ್ ಗೆ ಮಂಡ್ಯ ಜನತೆ ತೋರುತ್ತಿರುವ ಪ್ರೀತಿ ಜೆಡಿಎಸ್ ನಾಯಕರಲ್ಲಿ ಕಂಪು ಮೂಡಿಸಿದೆ ಎಂದು ಹೇಳಲಾಗುತ್ತಿದೆ.
ಒಂದು ವೇಳೆ ಅಭಿಷೇಕ್ ರಾಜಕೀಯ ಆಯ್ಕೆ ಮಾಡಿಕೊಂಡರೇ ಜೆಡಿಎಸ್ ಗೆ ಪೆಟ್ಟು ಬೀಳಲಿದೆ ಎಂದು ಹೇಳಲಾಗುತ್ತಿದೆ, ಈಗಾಗಲೇ ಮಂಡ್ಯ ಕ್ಷೇತ್ರದಿಂದ ನಿಖಿಲ್ ಕುಮಾರ್ ಸ್ವಾಮಿ ಅವರನ್ನು ಕಣಕ್ಕಿಳಿಸಬೇಕೆಂದು ಜೆಡಿಎಸ್ ಸಿದ್ಥತೆ ನಡೆಸಲಾಗುತ್ತಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅಥವಾ ಅಭಿಷೇಕ್‍ಗೌಡ ಇಬ್ಬರಲ್ಲಿ ಯಾರು ಸ್ಪರ್ಧಿಸುತ್ತಾರೆ ಎಂಬ ಬಿರುಸಿನ ಚರ್ಚೆ ಶುರುವಾಗಿದೆ. ಮಂಡ್ಯ ಉತ್ತರಾಧಿಕಾರಿ ಯಾರಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅಂಬರೀಷ್Nikhil Kumarನಿಖಿಲ್ ಕುಮಾರ್Abhishek Gowdaಅಭಿಷೇಕ್ ಗೌಡAmbreeshMandya Loksabha Elelctionಮಂಡ್ಯ ಲೋಕಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


