ರಾಜಕೀಯ

ಆಪರೇಷನ್ ಕಮಲ, ಬಿಜೆಪಿಗೆ ಮತ್ತೆ ಮುಖಭಂಗ ಖಂಡಿತಾ: ಮಾಜಿ ಸಿಎಂ ಸಿದ್ದರಾಮಯ್ಯ

ಆಪರೇಷನ್ ಕಮಲದ ಮೂಲಕ ಬಿಜೆಪಿ ಮತ್ತೆ ವಾಮಮಾರ್ಗದಲ್ಲಿ ಅಧಿಕಾರ ಹಿಡಿಯುವ ಪ್ರಯತ್ನ ನಡೆಸುತ್ತಿದೆ. ಆದರೆ ಬಿಜೆಪಿ ಯಾವುದೇ ಕಾರ್ಯಾಚರಣೆ ಫಲ ನೀಡುವುದಿಲ್ಲ, ಈ ಬಾರಿಯೂ ಬಿಎಸ್ ವೈ ಮುಖಭಂಗ ಅನುಭವಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಆಪರೇಷನ್ ಕಮಲ, ಬಿಜೆಪಿಗೆ ಮತ್ತೆ ಮುಖಭಂಗ ಖಂಡಿತಾ: ಮಾಜಿ ಸಿಎಂ ಸಿದ್ದರಾಮಯ್ಯ
ಸಂಗ್ರಹ ಚಿತ್ರ
Published On :
ಹಾವೇರಿ: ಆಪರೇಷನ್ ಕಮಲದ ಮೂಲಕ ಬಿಜೆಪಿ ಮತ್ತೆ ವಾಮಮಾರ್ಗದಲ್ಲಿ ಅಧಿಕಾರ ಹಿಡಿಯುವ ಪ್ರಯತ್ನ ನಡೆಸುತ್ತಿದೆ. ಆದರೆ ಬಿಜೆಪಿ ಯಾವುದೇ ಕಾರ್ಯಾಚರಣೆ ಫಲ ನೀಡುವುದಿಲ್ಲ, ಈ ಬಾರಿಯೂ ಬಿಎಸ್ ವೈ ಮುಖಭಂಗ ಅನುಭವಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಾವೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಶರಣ ಸಂಸ್ಕೃತಿ ಉತ್ಸವದಲ್ಲಿ ಮಾತನಾಡಿದ  ಮಾತನಾಡಿದ ಸಿದ್ದರಾಮಯ್ಯ ಅವರು, ಮೈತ್ರಿ ಸರ್ಕಾರ ಬಿಳುತ್ತೇ ಎಂದು ಬಿಜೆಪಿ ನಾಯಕರು ಹಗಲುಕನಸು ಕಾಣುತ್ತಿದ್ದಾರೆ. ಮೊದಲಿನಂತೆ ಪ್ರಯತ್ನ ಮಾಡಿ ಮತ್ತೇ ಮುಖಭಂಗ ಮಾಡಿಕೊಳ್ಳಲಿದ್ದಾರೆ ಎಂದು ಹೇಳಿದರು. ಅಂತೆಯೇ ನಮ್ಮ ಸಮಿಶ್ರ ಸರ್ಕಾರ ಸುಭದ್ರವಾಗಿದೆ. ಯಾವ ಶಾಸಕರು ಬಿಜೆಪಿಗೆ ಹೋಗಲ್ಲ. ಈ ಹಿಂದೆ ಯಡಿಯೂರಪ್ಪ ಬಹುಮತವಿಲ್ಲದೇ ಸರ್ಕಾರ ರಚಿಸಿ ಮುಖಭಂಗ ಮಾಡಿಸಿಕೊಂಡಿದ್ದಾರೆ. ಮತ್ತೆ ಅಂತಹುದೇ ಪರಿಸ್ಥಿತಿ ಮುಖಭಂಗ ಅವರಿಗೆ ಎದುರಾಗಲಿದೆ ಎಂದು ಹೇಳಿದರು.ಟ
ಇದೇ ವೇಳೆ ಸಿಎಂ ಕುಮಾರಸ್ವಾಮಿ ಅವರಿಗೆ ಕ್ಲರ್ಕ್ ಎಂದು ಟೀಕಿಸಿದ್ದ ಪ್ರಧಾನಿ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಎಲ್ಲಾ ಸ್ಥಾನಗಳಿಗೂ ಅದರದೇ ಆದಂತಹ ಗೌರವವಿರುತ್ತದೆ. ಆದರೆ ದೇಶದ ಪ್ರಧಾನಿ ಮೋದಿ ಅವರು ಈ ರೀತಿ ಹೇಳಿಕೆ ನೀಡಿದ್ದು ಸರಿಯಲ್ಲ. ಒಂದು ರಾಜ್ಯದ ಮುಖ್ಯಮಂತ್ರಿಗೆ ಪ್ರಧಾನಿಯಾಗಿ ಈ ರೀತಿ ಹೇಳಿಕೆ ನೀಡಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.