ರಾಜಕೀಯ

ಆಪರೇಷನ್ ಕಮಲದ ಭೀತಿ: ಮುಖ್ಯಮಂತ್ರಿ ಕುಮಾರಸ್ವಾಮಿ ರಾಜಕೀಯ ಕಾರ್ಯದರ್ಶಿಯಾಗಿ ವಿ. ಮುನಿಯಪ್ಪ ನೇಮಕ

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಮುನಿಯಪ್ಪ ಅವರನ್ನು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಆಪರೇಷನ್ ಕಮಲದ ಭೀತಿ: ಮುಖ್ಯಮಂತ್ರಿ ಕುಮಾರಸ್ವಾಮಿ ರಾಜಕೀಯ ಕಾರ್ಯದರ್ಶಿಯಾಗಿ ವಿ. ಮುನಿಯಪ್ಪ ನೇಮಕ
ಎಚ್. ಡಿ. ಕುಮಾರಸ್ವಾಮಿ
Published On :

ಬೆಂಗಳೂರು:ಶಿಡ್ಲಘಟ್ಟ ವಿಧಾನಸಭಾ  ಕ್ಷೇತ್ರದ ಶಾಸಕ ವಿ. ಮುನಿಯಪ್ಪ ಅವರನ್ನು  ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

 ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಯ 104 ಶಾಸಕರು ಹರಿಯಾಣದ ಗುರುಗ್ರಾಮ್ ನಲ್ಲಿ ವಾಸ್ತವ್ಯೂ ಹೂಡಿದ್ದು,ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಖರೀದಿಯ ಭೀತಿಯಲ್ಲಿರುವಂತೆ  ಇದೀಗ  ವಿ. ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಕೆಲ ಬಿಜೆಪಿಯ ಶಾಸಕರೊಂದಿಗೆ ಮೂವರು ಕಾಂಗ್ರೆಸ್ ಶಾಸಕರು ನಿನ್ನೆಯಿಂದ  ಮುಂಬೈನ ಹೋಟೆಲ್ ವೊಂದರಲ್ಲಿ ವಾಸ್ತವ್ಯ ಹೂಡಿದ್ದು,  ಆಪರೇಷನ್ ಕಮಲದ ಅನುಮಾನ ಮೂಡುತ್ತಿದೆ.
ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಭದ್ರಗೊಳಿಸಲು ಆಡಳಿತಾ ರೂಢ ಪಕ್ಷಗಳ ಶಾಸಕರನ್ನು ಖರೀದಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.